ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಅಧಿಕಾರಿಗಳು ಆರೋಪಿಗಳಾದ ಪದ್ಮನಾಭ ಹಾಗೂ ಪರಶುರಾಮ್ ರನ್ನು ಶಿವಮೊಗ್ಗದ 2ನೇ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಜುಲೈ 3ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕರಾದಂತಹ ಚಂದ್ರಶೇಖರನ್ ಅವರು ನಿಗಮದಲ್ಲಿ 187 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 3ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಕುರಿತು ಆದೇಶ ಹೊರಡಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ಚಂದ್ರಶೇಖರನ್ ಆತ್ಮಹತ್ಯೆ ಕೇಸಿನ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ಅವ್ಯವಹಾರ ನಡೆದಿತ್ತು. ಡೆತ್ ನೋಟ್ ಬರೆದಿಟ್ಟು ಚಂದ್ರಶೇಖರನ್ ಆತ್ಮಹತ್ಯೆಗೆ ಶರಣಾಗಿದ್ದರು.

Share.
Exit mobile version