ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಲ್ಲ ಅವರು ಸ್ಫೋಟಕ ವಾದಂತಹ ವಿಷಯ ಬಹಿರಂಗಗೊಳಿಸಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಸಾಕ್ಷವನ್ನು ನಾಶಪಡಿಸಿಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ರಾಜಿನಾಮೆಗೆ ಆಗ್ರಹಿಸುತ್ತಿದ್ದಾರೆ ಅದು ಅವರ ಧರ್ಮ. ಆದರೆ ಪ್ರಕರಣದಲ್ಲಿ ನಾನು ಯಾವುದೇ ರೀತಿಯಾದಂತಹ ಸಾಕ್ಷ ನಾಶಪಡಿಸಿಲ್ಲ.ಇದು ಕಂಪ್ಯೂಟರ್ ಯುಗ, ಎಲ್ಲವೂ ಕೂಡ ಅದರಲ್ಲೇ ಇರುತ್ತದೆ. ಹೀಗಿರುವಾಗ ನಾನು ಹೇಗೆ ಸಾಕ್ಷಿ ನಾಶಪಡಿಸುವುದಕ್ಕೆ ಆಗುತ್ತೆ. ಯಾವುದೇ ತನಿಖೆಗೂ ಕೂಡ ಸಿದ್ದನಿದ್ದೇನೆ ತನಿಖೆಗೆ ಸಹಕಾರ ನೀಡುತ್ತೇನೆ ಎಂದರು.
ರಿವ್ಯೂವ್ ಸಭೆ ಮಾಡುವ ಅಧಿಕಾರ ಅಧಿಕಾರಿಗಳಿಗೆ ಇರುತ್ತದೆ. ನೀತಿ ಸಂಹಿತೆ ಇದ್ದಿದ್ದರಿಂದ ನಾನು ಯಾವುದೇ ಸಭೆ ಮಾಡಿಲ್ಲ. ಅಂತಾರಾಜ್ಯಗಳಿಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಮಾಹಿತಿ ಇದೆ. ಆ ಹಣವನ್ನು ವಾಪಸ್ ತರುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಇದು ಪರಿಶಿಷ್ಟ ಪಂಗಡಗಳಿಗೆ ಸೇರಿದ ಹಣ. ನೂರಕ್ಕೆ ನೂರರಷ್ಟು ಹಣವನ್ನು ತಂದೇ ತರುತ್ತೇವೆ.ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮದಲ್ಲಿ ನನ್ನ ಪಾತ್ರವಿಲ್ಲ. ಮುಖ್ಯಮಂತ್ರಿಗಳು ರಾಜೀನಾಮೆ ಕೇಳಿದರೆ ನಾನು ಕೊಡಲು ಸಿದ್ಧನಿದ್ದೇನೆ ಎಂದರು.