ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನು ಇಡಿ ಅಧಿಕಾರಿಗಳು ಕಚೇರಿಗೆ ಕರೆತಂದು ವಿಚಾರಣೆ ನಡೆಸಿದದ್ದರು. ಇದೀಗ ವಿಚಾರಣೆ ಅಂತ್ಯವಾಗಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾ ವಿಚಾರಣೆ ಅಂತ್ಯವಾಗಿದೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ ಮಂಜುಳಾ ಅವರನ್ನು ಅಧಿಕಾರಿಗಳ ವಿಚಾರಣೆ ನಡೆಸಿದ್ದರು.
ವಿಚಾರಣೆಯ ಬಳಿಕ ಇಡಿ ಅಧಿಕಾರಿಗಳು ಅವರನ್ನು ಪುನಹ ಅಪಾರ್ಟ್ಮೆಂಟ್ನಲ್ಲಿ ಬಿಟ್ಟು ತೆರಳಿದ್ದಾರೆ. ನಾಗೇಂದ್ರ ರಾಮ್ಕಿ ಉತ್ಸವ ಅಪಾರ್ಟ್ಮೆಂಟಲ್ಲಿ ಬಿಟ್ಟು ಹೋಗಿದ್ದಾರೆ. ಸದ್ಯ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂದಿಸಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.