ಬೆಂಗಳೂರು: ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ. ಟಿ ಖಜಾನೆ ಇಲಾಖೆಯಿಂದಲೇ 180 ಕೋಟಿ ವರ್ಗಾವಣೆ ಆಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಖಜಾನೆಯಿಂದ ವರ್ಗಾವಣೆಯಾಗಲು ಸಾಧ್ಯವಿಲ್ಲ. ಖಜಾನೆಯಿಂದ ಇಲಾಖೆಗೆ ಹಣ ಹೋಗಿರುತ್ತದೆ. ಅಲ್ಲಿ ಅವ್ಯವಹಾರವಾಗಿರುವ ಬಗ್ಗೆ ಎಸ್.ಐ. ಟಿ ತನಿಖೆ ಮಾಡುತ್ತಿದೆ. ಸಿಬಿಐ, ಎಸ್.ಐ ಟಿ ಮತ್ತು ಇ. ಡಿ. ವತಿಯಿಂದ ಮೂರು ತನಿಖೆಗಳಾಗುತ್ತಿವೆ. ತನಿಖೆ ವರದಿ ಇನ್ನೂ ಬಂದಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಾಲ್ಮೀಕಿ ನಿಗಮ ಅವ್ಯವಹಾರ: ವರದಿ ಬಂದ ನಂತರ ಕ್ರಮ
ಆರ್ಥಿಕ ಇಲಾಖೆ ಸಚಿವರಾಗಿರುವ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಬೇಕೆಂದು ಜಿ. ಟಿ .ದೇವೇಗೌಡರು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬ್ಯಾಂಕುಗಳಲ್ಲಿ ಆಗುವ ಅವ್ಯವಹಾರಗಳಿಗೆಲ್ಲಾ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿಗಳು ರಾಜಿನಾಮೆ ನೀಡಬೇಕಲ್ಲ ಎಂದರು. ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿಯಾಗಲಿ ಅಂತಿಮ ವರದಿಯಾಗಲಿ ಬಂದಿಲ್ಲ. ಆರೋಪಪಟ್ಟಿ ಹಾಕಿದ ಮೇಲೆ ವರದಿ ಬರುತ್ತದೆ ಎಂದರು.
ಖಜಾನೆಯಿಂದ ಹಣ ವರ್ಗಾವಣೆಯಾಗಿರುವುದು ಇಲಾಖೆಯ ಗಮನಕ್ಕೆ ಬರಲಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿ ಪ್ರತಿ ಸಾರಿಯೂ ನನ್ನ ಬಳಿ ಬರುವುದಿಲ್ಲ. ಎಷ್ಟು ಹಣವಿದೆಯೋ ಅಷ್ಟನ್ನು ಅಧಿಕಾರಿಗಳು ಬಿಡುಗಡೆ ಮಾಡುತ್ತಾರೆ. ಅದಕ್ಕೆ ನನ್ನ ಸಹಿ ಅಗತ್ಯವಿಲ್ಲ. ಪ್ರಕರಣದ ತನಿಖೆ ಇನ್ನೂ ಮುಗಿದೇ ಇಲ್ಲ. ತನಿಖೆ ಮಾಡಿ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
BIG NEWS: ‘ಮುಡಾ’ದಿಂದ ಬದಲಿ ನಿವೇಶನ ನೀಡಿರುವುದು ‘ಕಾನೂನುಬದ್ಧ’ ಎನ್ನುವುದು ನಮ್ಮ ವಾದ: ಸಿಎಂ ಸಿದ್ದರಾಮಯ್ಯ
ರಾಜ್ಯಾಧ್ಯಂತ ‘ಡೆಂಗ್ಯೂ’ ಆರ್ಭಟ: ‘ಆರೋಗ್ಯ ಇಲಾಖೆ’ಯಿಂದ ಈ ಕಟ್ಟುನಿಟ್ಟಿನ ಕ್ರಮಕ್ಕೆ ಆದೇಶ