ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ದಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಯೂನಿಯನ್ ಬ್ಯಾಂಕಿನ ಮೂವರು ಸಿಬ್ಬಂದಿಗಳಿಗೆ ಎಸ್ಐಟಿ ತುರ್ತು ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ.
ಹೌದು ನಿಗಮದ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತ ರೌಲ್, ಬ್ಯಾಂಕ್ ಬ್ರಾಂಚ್ ಹೆಡ್ ದೀಪಾ ಎಸ್, ಕೃಷ್ಣಮೂರ್ತಿಗೆ ನೋಟಿಸ್ ನೀಡಲಾಗಿದೆ. ತುರ್ತಾಗಿ ವಿಚಾರಣೆಗೆ ಹಾಜರಾಗಲು ನೋಟಿಸ್ ಕೊಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಇಡಿ ಎಂಟ್ರಿ ಕೊಟ್ಟಿದ್ದು, ಈಗಾಗಲೇ ಹಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಒಂದು ಪ್ರಕರಣದಲ್ಲಿ ನಿಗಮದ ಅಧಿಕ ಚಂದ್ರಶೇಖರನ್ ಅವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ಹಾಗಾಗಿ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು.
ಈಗಾಗಲೇ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬೀ ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ ಅಲ್ಲದೆ ಈ ಒಂದು ಹಗರಣಕ್ಕೆ ಸಂಬಂಧಿಸಿದಂತೆ ವೈದಿಕ ಸಚಿವ ಶರಣಪ್ರಕಾಶ್ ಪಾಟೀಲ್ ಅವರ ಹೆಸರು ಕೂಡ ತಳಕು ಹಾಕಿಕೊಂಡಿದೆ ಹಾಗಾಗಿ ಈ ಒಂದು ಪ್ರಕರಣ ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿ ಪರಿಣಮಿಸಿದೆ.