ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಕೋಟ್ಯಂತರ ಹಣ ಅವ್ಯವಹಾರ ಆರೋಪ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಇಂದು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಎಸ್ ಐ ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಇಬ್ಬರು ಆರೋಪಿಗಳ ಜೊತೆಗೆ ಸ್ಥಳ ಮಹಜರನ್ನು ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದಾರೆ.
ಬೆಂಗಳೂರಿನ ವಸಂತನಗರದಲ್ಲಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿರುವಂತ ಎಸ್ಐಟಿ ಅಧಿಕಾರಿಗಳು ಡಿಜಿಟಲ್ ಎವಿಡೆನ್ಸ್ ಗಾಗಿ ಕಚೇರಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ತನಿಖೆಯನ್ನು ಚುರುಕುಗೊಳಿಸಿದ್ದಂತ ಎಸ್ಐಟಿ ಅಧಿಕಾರಿಗಳು ನಿಗಮದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದರು. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಮೂಲಕ ತಮ್ಮ ವಶಕ್ಕೆ ಪಡೆದಿದ್ದಾರೆ. ಈಗ ನಿಗಮದ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ.
‘ಬ್ರದರ್’ ಎನ್ನುವ ಕಾರಣಕ್ಕೆ ಸಿದ್ಧರಾಮಯ್ಯ ಸರ್ಕಾರ ‘ಈ ಪೆಡ್ಲರ್’ಗೂ ‘ಅಮಾಯಕ’ ಪಟ್ಟ ಕಟ್ಟಿದರೆ ಅಚ್ಚರಿ ಇಲ್ಲ: ಬಿಜೆಪಿ
ರಾಜ್ಯ ಸರ್ಕಾರದ ‘ಲೆಟರ್ ಹೆಡ್’ ದುರ್ಬಳಕೆ ಆರೋಪ : ಡಾ.ಸುಧಾಕರ್ ವಿರುದ್ಧ ಕೇಸ್ ದಾಖಲು