ಶಿವಮೊಗ್ಗ: ಮಹರ್ಷಿ ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ, ಸಿಐಡಿ ಅಧಿಕಾರಿಗಳು ಮೃತ ನೌಕರರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆಯಲ್ಲಿ ಅವರ ನಿವಾಸದಿಂದ ಡೆತ್ ನೋಟ್, ಪೆನ್ ಡ್ರೈವ್ ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗದ ವಿನೋಬನಗರದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಕೆಂಚಪ್ಪ ಲೇಔಟ್ ನಲ್ಲಿ ವಾಲ್ಮೀಕ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದಂತ ಚಂದ್ರಶೇಖರ್ ಡೆತ್ ನೋಟ್ ಬರೆದಿತ್ತು ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶಿಸಿತ್ತು.
ಈ ಬೆನ್ನಲ್ಲೇ ಶಿವಮೊಗ್ಗದ ಮೃತ ನೌಕರನನ ಮನೆಗೆ ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ಡಿವೈಎಸ್ಪಿ ಮೊಹಮ್ಮದ್ ರಫಿ ನೇತೃತ್ವದ ಆರು ಅಧಿಕಾರಿಗಳ ತಂಡ ಭೇಟಿ ನೀಡಿತು.
ಮೃತ ಅಧಿಕಾರಿ ಚಂದ್ರಶೇಖರ್ ಅವರ ಪತ್ನಿಯೊಂದಿಗೆ ಸುಮಾರು 45 ನಿಮಿಷಗಳ ಕಾಲ ಚರ್ಚೆ ನಡೆಸಿತು. ಅವರಿಂದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿಯನ್ನು ಪಡೆದರು.
ಈ ಬಳಿಕ ಚಂದ್ರಶೇಖರ್ ಅವರಿಗೆ ಸಂಬಂಧಿಸಿದಂತ ಕೆಲ ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಮನೆಯಲ್ಲಿದ್ದಂತ ಡೆತ್ ನೋಟ್, ಪೆನ್ ಡ್ರೈವ್ ಒಂದನ್ನು ವಶಕ್ಕೆ ಪಡೆದಿದೆ. ಅದರ ಮೇಲೆ ಪದ್ಮನಾಭ್ ಎಂಬುದಾಗಿ ಬರೆದಿದೆ ಎನ್ನಲಾಗುತ್ತಿದೆ.
ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ‘ಬಿಭವ್ ಕುಮಾರ್’ಗೆ 3 ದಿನ ಪೊಲೀಸ್ ಕಸ್ಟಡಿಗೆ
BREAKING: ‘ಪ್ರಜ್ವಲ್ ರೇವಣ್ಣ’ ಅಶ್ಲೀಲ ವೀಡಿಯೋ ಕೇಸ್: ಏಕಕಾಲಕ್ಕೆ ಹಾಸನ ಜಿಲ್ಲೆಯ 3 ಕಡೆ ‘SIT ದಾಳಿ’