ಬಾಗಲಕೋಟೆ: ರಾಜ್ಯ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಬಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಸಾಲ ಸೌಲಭ್ಯಗಳಿಗಾಗಿ ಅರ್ಹ ಪರಿಶಿಷ್ಟ ಪಂಗಡ, ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ ಅರಣ್ಯ ಆಧಾರಿತ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ನೇರ ಸಾಲ ಯೋಜನೆಯಡಿ 1 ಲಕ್ಷ ರೂ.ಗಳಲ್ಲಿ ಶೇ.50 ಸಾಲ, ಶೇ.50 ರಷ್ಟು ಸಹಾಯಧನ ನೀಡಲಾಗುತ್ತದೆ. ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ ಇವಿ ಮತ್ತು ಇತರೆ ದ್ವಿಚಕ್ರ ವಾಹನ ಖರೀದಿಗೆ ಗರಿಷ್ಠ 50 ಸಾವಿರ ಸಹಾಯಧನ, ಉಳಿದ ಮೊತ್ತ ಬ್ಯಾಂಕ್ ಸಾಲದ ರೂಪದಲ್ಲಿ ನೀಡಲಾಗುತ್ತದೆ. ಐಎಸ್ಬಿ ಚಟುವಟಿಕೆಗಾಗಿ 2 ಲಕ್ಷ ರೂ.ಗಳ ಸಹಾಯಧನ, ಸರಕು ಸಾಗಣೆ ವಾಹನಕ್ಕೆ ಗರಿಷ್ಟ 3.50 ಲಕ್ಷ ರೂ. ಸಹಾಯಧನ ನೀಡಲಾಗುತ್ತದೆ.
ಮೈಕ್ರೋ ಕ್ರೆಡಿಟ್ ಕಿರು ಸಾಲ ಯೋಜನೆಯಡಿ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ 2.50 ಲಕ್ಷ ರೂ.ಗಳ ಸಾಲ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನ ನೀಡಲಾಗುತ್ತದೆ. ಭೂ ಒಡೆತನ ಯೋಜನೆಯಡಿ ಭೂ ರಹಿತ ಕೃಷಿ ಕಾರ್ಮಿಕರಿಗೆ ಸಹಾಯಧನ ಮತ್ತು ಅವಧಿ ಸಾಲದೊಂದಿಗೆ ಭೂಮಿ ಖರೀದಿ, ಗಂಗಾ ಕಲ್ಯಾಣ ಯೋಜನೆಯಡಿ ಖುಷ್ಕಿ ಜಮೀನು ಹೊಂದಿದ ಸಣ್ಣ, ಅತೀ ಸಣ್ಣ ರೈತರಿಗೆ ಸಹಾಯಧನ ಮತ್ತು ಅವಧಿ ಸಾಲದಲ್ಲಿ ವೈಯಕ್ತಿಕ ಕೊಳವೆಬಾವಿ ಕೊರೆದು ನೀರಾವರಿ ಕಲ್ಪಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ದೂಸಂ.08354-235016ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.