ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನಲ್ಲಿ ಬಿಜೆಪಿಯು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಹೌದು ವಾಲ್ಮೀಕಿ ನಿಗಮದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ಶಾಸಕರ ಭವನದ ವಾಲ್ಮೀಕಿ ಪ್ರತಿಮೆ ಎದುರು ಬಿಜೆಪಿ ನಾಯಕರು ಧರಣಿ ನಡೆಸಲಿದ್ದಾರೆ.
ಈ ಒಂದು ಪ್ರತಿಭಟನೆಯು ವಿಧಾನಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿದೆ. ಬಿಜೆಪಿ ಶಾಸಕರು, ಎಂಎಲ್‌ಸಿಗಳು ಸೇರಿದಂತೆ ಕಾರ್ಯಕರ್ತರು ಈ ಒಂದು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.