ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಬಸನಗೌಡ ದದ್ದಲ್ ಅವರ ಇಡೀ ವಿಚಾರಣೆ ಇದೀಗ ಅಂತ್ಯವಾಗಿದೆ.
ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆ ಅಂತ್ಯವಾದ ಬಳಿಕ ಹೊರಬಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಅಧಿಕಾರಿಗಳು ಸೂಚಿಸಿಲ್ಲ. ಅಕಸ್ಮಾತ್ ಕರೆದರೆ ನಾಳೆ ವಿಚಾರಣೆಗೆ ಹಾಜರಾಗುವುದಾಗಿ ಶಾಸಕ ಬಸನಗೌಡ ದದ್ದಲ್ ಹೇಳಿದರು.