ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ ಐ ಟಿ ಪೊಲೀಸರು ತನಿಖೆಯನ್ನು ಚುರುಕುಗೋಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಹಕಾರ ಸಂಘದ ಅಧ್ಯಕ್ಷ ಸತ್ಯನಾರಾಯಣ ಇಟಕಾರಿ ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. 18 ನಕಲಿ ಖಾತೆಯನ್ನು ಸೃಷ್ಟಿಸಿ ಹಣ ವರ್ಗಾಯಿಸಿದ ಆರೋಪದ ಅಡಿ ಇದೀಗ ಆತನನ್ನು ಬಂಧಿಸಲಾಗಿದೆ. ಎಂಟು ದಿನಗಳ ಕಸ್ಟಡಿಗೆ SIT ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ನಿನ್ನೆ ಪೊಲೀಸರು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದರು. ತೆಲಂಗಾಣದ ನಲ್ಲಕುಂಟ ಪ್ರದೇಶದಲ್ಲಿರುವ ಸಹಕಾರ ಸಂಘದ ಅಧ್ಯಕ್ಷ ಎಂದು ಹೇಳಲಾಗುತ್ತಿದೆ.







