ವಿಜಯಪುರ : ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಬಿಐ ವಹಿಸಿ ಎಂದು ಪತ್ರ ಬರೆದಿದ್ದಾರೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಎನ್ನುವವರು ಇತ್ತೀಚಿಗೆ ನಿಗಮದಿಂದ ಕೋಟ್ಯಾಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು ಈ ಒಂದು ಘಟನೆಗೆ ಸಂಬಂಧಿಸಿದಂತೆ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಕರಣವನ್ನು ಸಿಬಿಐ ವಹಿಸಿ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಜೊತೆಗೆ 187.3 ಕೋಟಿ ರೂಪಾಯಿಗಳನ್ನು ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ. ವಹಿವಾಟು ನಡೆಸುವ ಮುನ್ನ ಪಾಲಿಕೆ ಅಧಿಕಾರಿಗಳ ಸಹಿ ನಕಲಿಯಾಗಿದೆ. ಈ ಪ್ರಕರಣದ ಪ್ರಸ್ತುತ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಸಿಐಡಿ ಸರಕಾರಕ್ಕೆ ವರದಿ ನೀಡಿರುವುದರಿಂದ ಆರೋಪಿಗಳ ರಕ್ಷಣೆಗೆ ಅನಗತ್ಯ ಪ್ರಭಾವ ಬೀರುವ ಆತಂಕ ಇದೆ. ಸರ್ಕಾರ ತನ್ನ ಪ್ರಭಾವಕ್ಕೆ ಒಳಗಾಗಿರುವ ಸಿಐಡಿಗೆ ತನಿಖೆಯನ್ನು ವಹಿಸುವುದು ಸಾಮಾನ್ಯ ಅಭ್ಯಾಸವಾಗಿದೆ ಎಂದು ಯತ್ನಾಳ ಕಿಡಿಕಾರಿದ್ದಾರೆ.