ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಇಂದು ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಇಂದು ಅರವಿಂದ್ ಲಿಂಬಾವಳಿ ನೇತೃತ್ವದ ನಿಯೋಗದಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಸಂಬಂದ ದಾಖಲೆ ಸಮೇತ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಅರವಿಂದ್ ಲಿಂಬಾವಳಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ.ಪಿ. ಹರೀಶ್, ಮಾಜಿ ಶಾಸಕರಾದ ಕುಮಾರಬಂಗಾರಪ್ಪ ಸೋಮಲಿಂಗಪ್ಪ ಸೇರಿದಂತೆ ಬಿಜೆಪಿ ಹಲವು ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದಾರೆ.