ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದಲ್ಲಿ ಇಂದು ಇಡೀ ದಿನ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದರು. ಈ ಬಳಿಕ ಹೆಚ್ಚಿನ ವಿಚಾರಣೆಗಾಗಿ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಕಳೆದ ಎರಡು ದಿನಗಳಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸದ ಮೇಲೆ ದಾಳಿ ನಡೆಸಿ, ಮಹತ್ವದ ದಾಖಲೆಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದರು. ಅಲ್ಲದೇ ಮೊದಲು ಬಿ.ನಾಗೇಂದ್ರ ಅವರ ಪಿಎ ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದರು. ಆ ಬಳಿಕ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.
ಇಂದು ಇಡೀ ದಿನ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಿಚಾರಣೆ ನಡೆಸಿದರು. ಆ ಬಳಿಕ ಇಡಿ ಅಧಿಕಾರಿಗಳು ಬಿ.ನಾಗೇಂದ್ರ ಅವರನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.
ಒಂದೆಡೆ ಎಸ್ಐಟಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಹಣ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿದ್ದರೇ, ಮತ್ತೊಂದೆಡೆ ಇಡಿ ಅಧಿಕಾರಿಗಳು ಪ್ರಕರಣ ಸಂಬಂಧ ವಿಚಾರಣೆಗೆ ಎಂಟ್ರಿಯಾಗಿದ್ದಾರೆ.
ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ವಾರವಿಡೀ ಮೊಟ್ಟೆ ವಿತರಣೆ
BREAKING: ‘ಅಗಲಿದ ಅಪರ್ಣಾ’ ಪಂಚಭೂತಗಳಲ್ಲಿ ಲೀನ: ‘ಅಚ್ಚಕನ್ನಡ ನಿರೂಪಕಿ’ ಇನ್ನೂ ‘ನೆನಪು’ ಮಾತ್ರ | Anchor Aparna