ಬೆಂಗಳೂರು: ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಪರಿಶಿಷ್ಟ ನಿಗಮದ ಹಿಂದಿನ ಎಂಡಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈ ಎಫ್ಐಆರ್ ಗೆ ಇಂದು ಹೈಕೋರ್ಟ್ ತಡೆ ನೀಡಿದೆ.
ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಹೌದು ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಒತ್ತಡದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದಾಗಿ ಒಪ್ಪಿಕೊಳ್ಳುವಂತೆ ತಮ್ಮ ಮೇಲೆ ಇಡಿ ಅಧಿಕಾರಿಗಳು ಒತ್ತಡ ಹಾಕಿದ್ದಾರೆ ಹಾಗೂ, ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್.ಬಿ ದೂರು ನೀಡಿದ್ದರು.
ಈ ವೇಳೆ ಇಡಿ ಅಧಿಕಾರಿಗಳ ಪರ ಹಾಜರಾದ ಹಿರಿಯ ವಕೀಲ ಮಧುಕರ್ ದೇಶಪಾಂಡೆ, ಅರ್ಜಿದಾರರು ಇಡಿ ಅಧಿಕಾರಿಗಳಾಗಿದ್ದಾರೆ, ಅವರು ತಮ್ಮ ಅಧಿಕೃತ ಕರ್ತವ್ಯವನ್ನಷ್ಟೇ ನಿರ್ವಹಿಸಿದ್ದಾರೆ. ಹೀಗಿದ್ದರೂ ಇಡಿ ವಿಚಾರಣೆಗೆ ಹಾಜರಾಗಿದ್ದ ದೂರುದಾರರು, ವಿಚಾರಣೆ ಮುಗಿದ ಬಳಿಕ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಇ.ಡಿ. ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದರು.
ಇಡಿ ಅಧಿಕಾರಿಗಳ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲು ಹಾಗೂ ಯಾವುದೇ ಪ್ರಾಥಮಿಕ ವಿಚಾರಣೆ ನಡೆಸದೇ ಇ.ಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಗಾಗಿ, ಅರ್ಜಿಯನ್ನು ಕೂಡಲೇ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.ಅದಕ್ಕೆ ಒಪ್ಪಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಇಂದು ನಡೆಸಿತು. ಈ ಬಳಿಕ ವಾದ, ಪ್ರತಿವಾದ ಆಲಿಸಿದಂತ ಹೈಕೋರ್ಟ್ ನ್ಯಾಯಪೀಠವು ಇಡಿ ಅಧಿಕಾರಿಗಳ ವಿರುದ್ಧದ ಎಫ್ಐಆರ್ ಗೆ ತಡೆಯನ್ನು ನೀಡಿದೆ.
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024
ರೈತ ಸ್ನೇಹಿ, ತೆರಿಗೆ ಹೊರೆ ರಹಿತ, ಸರ್ವ ಜನಕೇಂದ್ರಿತ, ಸುಭದ್ರ ಬಜೆಟ್: ಆರ್.ಅಶೋಕ್ | Union Budget 2024