ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಬಿ ನಾಗೇಂದ್ರ ಅವರ ಆಪ್ತ ಸಹಾಯಕ ಹರೀಶ್ ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇನ್ನು ಈ ಒಂದು ಪ್ರಕರಣಕ್ಕೆ ನಿನ್ನೆ ಸತತ ಎಂಟು ಗಂಟೆಗಳ ಕಾಲ ಮಾಜಿ ಸಚಿವ ಬಿ ನಾಗೇಂದ್ರ ಅವರು ಎಸ್ಐಟಿ ವಿಚಾರಣೆ ಎದುರಿಸಿದ್ದರು.
ಅಲ್ಲದೆ ನಾಳೆ ಕೂಡ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದರು ಆದರೆ ಇಂದು ವಿಚಾರಣೆಗೆ ನಾಗೇಂದ್ರ ಅವರು ಗೈರು ಆಗಿರುವುದನ್ನು ಗಮನಿಸಿ ಇದೀಗ ಮೂರನೇ ಬಾರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ. ನಿಗಮದ ಅಧ್ಯಕ್ಷ ಬಸನಗೌಡ ಗದ್ದಲ್ ಅವರಿಗೂ ಕೂಡ ಹೊಸ ಅಧಿಕಾರಿಗಳು ನಾಳೆ ವಿಚಾರಣೆಗೆ ಹಾಜರಾಗಿ ಎಂದು ಮೂರನೇ ಬಾರಿಗೆ ನೋಟಿಸ್ ನೀಡಿದ್ದಾರೆ.
ಹೌದು ಇಂದು ಮಾಜಿ ಸಚಿವ ಬಿ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಮತ್ತೆ ನೋಟಿಸ್ ಜಾರಿ ಮಾಡಲಾಗಿದೆ. ಶಾಸಕರು ನಾಳೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಇಬ್ಬರಿಗೂ ಮೂರನೇ ಸಲ SIT ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.