ಬಳ್ಳಾರಿ : ಶಿವಮೊಗ್ಗದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಎಂಎಲ್‌ಸಿ ರವಿಕುಮಾರ್ ಮಾತನಾಡಿ, ಈ ಒಂದು ಆತ್ಮಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಹೊಣೆಗಾರರಾಗಿದ್ದು ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.
ವಾಲ್ಮೀಕಿ ನಿಗಮದ ಅಭಿವೃದ್ಧಿ ಅಧೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಗಳ ಮುಂದೆ ಎಂಎಲ್ಸಿ ಎನ್ ರವಿ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು.ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಮುಖಂಡರ ಧರಣಿ ನಡೆಯುತ್ತಿದೆ.
ಸಚಿವ ಬಿ.ನಾಗೇಂದ್ರ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದೆ.ಆ ಅಧಿಕಾರಿ ಸಾವಿಗೆ ನೇರ ಕಾರಣ ಸಚಿವ ಬಿ ನಾಗೇಂದ್ರ.ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡು ಮೂರು ದಿನ ಕಳೆಯಿತು ಆದರೆ ಸಿಎಂ, ಡಿಸಿಎಂ ದೆಹಲಿಯಲ್ಲಿ ಮಜಾ ಮಾಡುತ್ತಿದ್ದಾರೆ. ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಇಲ್ಲದಿದ್ದರೆ ರಾಜ್ಯದಲ್ಲಿ ಉಗ್ರ ಹೋರಾಟ ಮಾಡುತ್ತೇವೆ.ನೈತಿಕ ಶಿವರಾಜ ನಾನು ಕೊಡಬೇಕು ಬಳ್ಳಾರಿ ಎಂ ಎಲ್ ಸಿ ಎಂ ರವಿಕುಮಾರ್ ಆಗ್ರಹಿಸಿದರು.