ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಹೈಕೋರ್ಟ್ನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ಮಾಜಿ ಸಚಿವ ಬಿ ನಾಗೇಂದ್ರಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೌದು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಬಳಿಕ ಸಿಬಿಐ ಇದೀಗ ಇಡಿಗೆ ಪತ್ರ ಬರೆದಿದೆ. ಇಡಿ ಬಳಿ ಇರುವ ಮಾಹಿತಿಯನ್ನು ಕೋರಿ ಸಿಬಿಐ ಇದೀಗ ಪತ್ರ ಬರೆದಿದೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಅರೆಸ್ಟ್ ಆಗಿದ್ದರು. ಇದೀಗ ಇಡಿ ಬಳಿಕ ಬಿ.ನಾಗೇಂದ್ರಗೆ ಸಿಬಿಐ ಸಂಕಷ್ಟ ಎದುರಾಗಿದೆ.