ಶಿವಮೊಗ್ಗ : ಇಡೀ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿವಮೊಗ್ಗದ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಚಂದ್ರಶೇಖರನ್ ತಪ್ಪಿತಸ್ಥರಲ್ಲ, ಹಣ ತಿಂದಿಲ್ಲ ಎಂದು ತನಿಖಾಧಿಕಾರಿ ಸ್ಪಷ್ಟನೆ ನೀಡಿದರು.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯಲ್ಲಿ ನಿಗಮದ ಮಾಜಿ ವ್ಯವಸ್ಥಾಪಕ ಚಂದ್ರಶೇಖರನ್ ತಪ್ಪಿತಸ್ಥರು ಎಂದು ಎಲ್ಲಿಯೂ ಕಂಡುಬಂದಿಲ್ಲ. ಅವರು ತಪ್ಪಿತಸ್ಥರು ಎಂದು ಆರೋಪಪಟ್ಟಿಯಲ್ಲೂ ಉಲ್ಲೇಖಿಸಿಲ್ಲ ಎಂದು ಸಿಐಡಿ ವಿಶೇಷ ತನಿಖಾ ತಂಡ ಸ್ಪಷ್ಟಪಡಿಸಿದೆ.
ತನಿಖಾ ತಂಡ 300 ಪುಟಗಳ ಆರೋಪಪಟ್ಟಿಯನ್ನು ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಸತ್ತವರ ಹೆಸರನ್ನು ಆರೋಪಪಟ್ಟಿಯಲ್ಲಿ ಸೇರಿಸಸುವುದು ಅಸಾಧ್ಯ. ಈ ಹಗರಣದಲ್ಲಿ ಎಂಟು ಪ್ರಕರಣ ದಾಖಲಾಗಿವೆ. ಆರೋಪ ಪಟ್ಟಿಯಲ್ಲಿ ಎಲ್ಲಿಯೂ ಅವರು ತಪ್ಪಿತಸ್ಥರು ಎಂದು ಉಲ್ಲೇಖಿಸಿಲ್ಲ ಎಂಬುದಾಗಿ ಪ್ರಕರಣದ ತನಿಖಾಧಿಕಾರಿ ರಫೀಕ್ ತಿಳಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದಲ್ಲಿ ಸಿಐಡಿ ತಂಡ ಸರಿಯಾಗಿ ತನಿಖೆ ನಡೆಸಿರದಿದ್ದರೆ, ಪತಿ ಹಣ ತಿಂದಿರಬಹುದು ಎಂದು ತನಿಖಾ ತಂಡ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದರೆ, ಹೈಕೋರ್ಟ್ ಮೊರೆ ಹೋಗುವೆ ಎಂದು ಚಂದ್ರಶೇಖರನ್ ಪತ್ನಿ ಕವಿತಾ ನೀಡಿದ್ದ ಹೇಳಿಕೆಯನ್ನು ಸಹ ನೀಡಿದ್ದರು. ಇದೀಗ ತನಿಖಾಧಿಕಾರಿಯು ಚಂದ್ರಶೇಖರನ್ ಯಾವುದೇ ಹಣ ತಿಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.