ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯದ (ED) ಇಬ್ಬರು ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ FIR ಅನ್ನು ರದ್ದುಗೊಳಿಸಿ ಹೈಕೋರ್ಟ್ ಇಂದು ಮಹತ್ವದ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆಯ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರಿಗೆ ಇಬ್ಬರು ಇಡೀ ಅಧಿಕಾರಿಗಳು ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆ ನಡೆಸಿ ಈ ಬಗ್ಗೆ ಆದೇಶಿಸಿದೆ.
ಜಾರಿ ನಿರ್ದೇಶನಾಲಯದ ಡೆಪ್ಯೂಟಿ ಡೈರೆಕ್ಟರ್ ಮನೋಜ್ ಮಿತ್ತಲ್ ಹಾಗೂ ಮತ್ತೋರ್ವ ಇ.ಡಿ.ಅಧಿಕಾರಿ ಮುರಳಿ ಕಣ್ಣನ್ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಹೈಕೋರ್ಟ್ ರದ್ದುಗೊಳಿಸಿದೆ. ಇವಂದು ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡುವಂತೆ ಇಡಿ ಅಧಿಕಾರಿಗಳು ಬೆದರಿಕೆ ಹಾಕಿದ್ದರು ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಕಲ್ಲೇಶ್ ಎನ್ನುವವರು FIR ದಾಖಲಿಸಿದ್ದರು.