ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತಹ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಬಸನಗೌಡ ದದ್ದಲ್ ಅವರು ನಾಪತ್ತೆಯಾಗಿದ್ದರು ಎಂಬ ವದಂತಿ ಹಬ್ಬಿತ್ತು, ಆದರೆ ನೀನೆ ವಿಧಾನಸೌಧದಲ್ಲಿ ಅಧಿವೇಶನದಲ್ಲಿ ಅವರು ದಿಡೀರ್ ಪ್ರತ್ಯಕ್ಷರಾಗಿದ್ದರು.
ಪ್ರಕರಣ ಸಂಬಂಧ ಎಸ್‌ಐಟಿ ಪೊಲೀಸರ ತನಿಖೆ ಎದುರಿಸಿದ ಬಳಿಕ ಇಡಿ ಬಂಧನ ಭೀತಿಯಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ವಿಧಾನಸಭೆಯ ಅಧಿವೇಶನ ವೇಳೆ ಪ್ರತ್ಯಕ್ಷರಾದರು. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ದದ್ದಲ್, ನಾನು ನಾಪತ್ತೆಯಾಗಿರಲಿಲ್ಲ. ಎರಡು ದಿನಗಳಿಂದ ನನ್ನ ಕ್ಷೇತ್ರಕ್ಕೆ ತೆರಳಿದ್ದೆ ಎಂದು ಸ್ಪಷ್ಟನೆ ನೀಡಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾರಿ ನಿರ್ದೇಶಾನಲಯದಿಂದ ಮತ್ತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಿಳಿಸಿದರು.
ಸದ್ಯ ಬಸನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ.ಏಕೆಂದರೆ ಅಧಿವೇಶನ ನಡೆಯುತ್ತಿದ್ದರಿಂದ ಅವರ ಬಂಧನ ಸದ್ಯಕ್ಕೆ ಇಲ್ಲ. ಹಾಗೊಂದು ವೇಳೆ ಬಂಧಿಸಲೇಬೇಕಾದರೆ ಹಿಡಿಧಿಕಾರಿಗಳು ಸಭಾಧ್ಯಕ್ಷರ ಅನುಮತಿ ಪಡೆದುಕೊಳ್ಳಬೇಕಾಗುತ್ತದೆ.ಒಂದು ವೇಳೆ ಸಭಾಧ್ಯಕ್ಷರು ಅನುಮತಿ ನೀಡಿದರೆ ಮಾತ್ರ ಬಸನಗೌಡ ದದ್ದಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಲಿದ್ದಾರೆ.