ಬೆಂಗಳೂರು : ವಾಲ್ಮೀಕಿ ನಿಗಮದ ಹಗರಣದಲ್ಲಿ ಇಂದು ಇಡಿ ಅಧಿಕಾರಿಗಳು ಇಡೀ ದಿನ ವಿಚಾರಣೆ ನಡೆಸಿದ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಂಧಿಸಿದ್ದಾರೆ ಎಂದು ಬಲಮೂಲಗಳಿಂದ ತಿಳಿದು ಬಂದಿದೆ. ಈ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು ಈ ಪ್ರಕರಣದಲ್ಲಿ ಇದೊಂದು ರಾಜಕೀಯ ಷಡ್ಯಂತ್ರವಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬಂಧನದ ಕುರಿತು ನನಗೆ ಮಾಹಿತಿ ಇಲ್ಲ. ಹೇಳಿಕೆ ದಾಖಲಿಸಲು ಈಡಿಯವರು ಕರೆದುಕೊಂಡು ಹೋಗಿದ್ದಾರೆ ಬಿ ನಾಗೇಂದ್ರ ಅರೆಸ್ಟ್ ಮಾಡಿರುವುದು ನನಗೆ ಗೊತ್ತಿಲ್ಲ ವಶಕ್ಕೆ ಪಡೆದಿದ್ದು ಅಷ್ಟೇ ಗೊತ್ತು ಎಂದು ಸಿದ್ದರಾಮಯ್ಯ ತಿಳಿಸಿದರು.
ಈಗಾಗಲೇ ವಾಲ್ಮೀಕಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಆದರೆ ಇದರ ಮೇಲೆ ಇಡಿ ತನಿಖೆ ಮಾಡುವುದಕ್ಕೆ ಹೊರಟಿದೆ. ಇದು ರಾಜಕೀಯ ಷಡ್ಯಂತ್ರ ಅಂತ ಹೇಳುತ್ತೇನೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.