ಬಳ್ಳಾರಿ: ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆ ಆಯೋಜಿಸಿದ್ದಂತ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮಾಹಿತಿ ನೀಡಿದ್ದು, ರಾಜಶೇಖರ ರೆಡ್ಡಿ ಹತ್ಯೆ ಹಿನ್ನಲೆಯಲ್ಲಿ ನಾಳೆಯ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ನಾಳೆ ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಾಳೆಯ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂದೂಡಿಕೆ ಮಾಡಲಾಗಿದೆ ಎಂದಿದ್ದಾರೆ.
ಆ.15, 2027ರಂದು ಮೊದಲ ಬುಲೆಟ್ ರೈಲು ಸಂಚಾರ ಆರಂಭ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್
ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ | Power Cut








