ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದ್ದಾರೆ.
2026 -27ನೇ ಸಾಲಿನ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ನೀಡುವ ರೀತಿಯಲ್ಲಿ ಇನ್ನೂ ಮುಂದೆ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯಪುಸ್ತಕಗಳನ್ನು ವಿತರಿಸಲಾಗುವುದು.
ಪ್ರಥಮ ಮತ್ತು ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಸುಮಾರು 15 ಲಕ್ಷ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗುತ್ತದೆ. ಸರ್ಕಾರಿ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳ, ಗುಣಮಟ್ಟದ ಶಿಕ್ಷಣ ನೀಡಲು ಶಾಲಾ ಶಿಕ್ಷಣ ಇಲಾಖೆಯಿಂದ ಅನೇಕ ಕ್ರಮ ಕೈಗೊಳ್ಳಲಾಗಿದೆ. ಇದುವರೆಗೆ 1-10 ತರಗತಿವರೆಗಿನ ಮಕ್ಕಳಿಗೆ ನೀಡಲಾಗುತ್ತಿದ್ದ ಉಚಿತ ಪಠ್ಯಪುಸ್ತಕ ಯೋಜನೆಯನ್ನು ದ್ವಿತೀಯ ಪಿಯುಸಿವರೆಗೂ ವಿಸ್ತರಿಸಲಾಗುವುದು ತಿಳಿಸಿದ್ದಾರೆ.
ಶಿಕ್ಷಣವು ಕೇವಲ ಅಂಕ ಗಳಿಕೆಗೆ ಸೀಮಿತವಾಗಬಾರದು, ಅದು ಬಾಳಿನ ಮೌಲ್ಯಗಳನ್ನು ಕಲಿಸಬೇಕು. ಈ ನಿಟ್ಟಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಎಲ್ಲ ಶಾಲೆಗಳಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. pic.twitter.com/SU7iZuBZLy
— DIPR Karnataka (@KarnatakaVarthe) November 15, 2025








