ಬೆಂಗಳೂರು: ಮಾನ್ಯ ಸಿದ್ಧರಾಮಯ್ಯ ( Siddaramaiah ) ಅವರು ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ( Vande Mataram Song ) ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು ಎಂಬುದಾಗಿ ಬಿಜೆಪಿ ಕರ್ನಾಟಕ ( BJP Karnataka ) ಒತ್ತಾಯಿಸಿದೆ.
ಮಾನ್ಯ @siddaramaiah ಅವರು ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ವಂದೇ ಮಾತರಂ ಗೀತೆಗೆ ಅವಮಾನ ಮಾಡುವ ಮೂಲಕ ಭಾರತೀಯರ ಏಕತೆಯ ಭಾವನೆಯನ್ನು ವಿಭಜಿಸುವ ಪ್ರಯತ್ನ ಮಾಡಿದ್ದು, ಭಾರತೀಯರ ಕ್ಷಮೆ ಕೋರಬೇಕು.#ರಾಷ್ಟ್ರದ್ರೋಹಿಕಾಂಗ್ರೆಸ್
— BJP Karnataka (@BJP4Karnataka) November 27, 2022
ಈ ಬಗ್ಗೆ ರಾಷ್ಟ್ರದ್ರೋಹಿ ಕಾಂಗ್ರೆಸ್ ಎಂಬುದಾಗಿ ಸರಣಿ ಟ್ವಿಟ್ ಮಾಡಿದ್ದು, ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸಿನಿಂದ ಒಪ್ಪಿಕೊಂಡಿರುವ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ. ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು, ಈಗ ಅದೇ ಸಾಲಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸೇರ್ಪಡೆಯಾಗಿದ್ದಾರೆ ಎಂದಿದೆ.
ಈ ದೇಶದಲ್ಲಿ ಎಲ್ಲ ಧರ್ಮೀಯರು ಮುಕ್ತ ಮನಸಿನಿಂದ ಒಪ್ಪಿಕೊಂಡಿರುವ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸುವುದು ಅವರ ಜಿಹಾದಿ ಮನಸ್ಥಿತಿ ತೋರಿಸುತ್ತದೆ.
ಬ್ರಿಟಿಷರು ವಂದೇ ಮಾತರಂ ಹಾಡನ್ನು ವಿರೋಧಿಸಿದ್ದರು, ಈಗ ಅದೇ ಸಾಲಿಗೆ ವಿಪಕ್ಷ ನಾಯಕ @siddaramaiah ಸೇರ್ಪಡೆಯಾಗಿದ್ದಾರೆ.#ರಾಷ್ಟ್ರದ್ರೋಹಿಕಾಂಗ್ರೆಸ್
— BJP Karnataka (@BJP4Karnataka) November 27, 2022
ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ ಎಂದು ವಾಗ್ಧಾಳಿ ನಡೆಸಿದೆ.
ಪ್ರತಿಪಕ್ಷದ ನಾಯಕ @siddaramaiah ವಂದೇ ಮಾತರಂ ಗೀತೆಗೆ ವಿರೋಧ ವ್ಯಕ್ತಪಡಿಸಿರುವುದು, ಅವರಿಗೆ ದೇಶದ ಏಕತೆಗಿಂತ ಅಧಿಕಾರಕ್ಕಾಗಿ ಸಮಾಜ ಒಡೆಯುವುದೇ ಮುಖ್ಯ ಎನ್ನುವುದನ್ನು ತೋರಿಸುತ್ತದೆ. #ರಾಷ್ಟ್ರದ್ರೋಹಿಕಾಂಗ್ರೆಸ್
— BJP Karnataka (@BJP4Karnataka) November 27, 2022