ಚಾಮರಾಜನಗರ: ರಾಜ್ಯದಲ್ಲಿ ಒಮಿಕ್ರಾನ್ ವೈರಸ್ ( Omicron Variant ) ಸೋಂಕಿನ ಪ್ರಕರಣಗಳು ಪತ್ತೆಯಾದ ನಂತ್ರ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಇದಲ್ಲದೇ ಹೆಚ್ಚಾಗುತ್ತಿರುವಂತ ಕೋವಿಡ್ ಸೋಂಕಿನ ( Coronavirus ) ಸಂಖ್ಯೆಗಳಿಂದ ಪೋಷಕರು ಮತ್ತಷ್ಟು ಭೀತಿಗೊಂಡಿದ್ದಾರೆ. ಶಾಲಾ-ಕಾಲೇಜುಗಳಿಗೆ ( School and College ) ರಜೆ ಘೋಷಿಸುವಂತೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ( Vatal Nagaraj ) ಒತ್ತಾಯಿಸಿದ್ದಾರೆ.
ಚಾಮರಾಜನಗರದಲ್ಲಿ ಇಂದು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಶಾಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಶಾಲಾ ಮಕ್ಕಳಿಗೆ ಲಸಿಕೆ ಕೂಡ ನೀಡಿಲ್ಲ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜು ಬಂದ್ ಮಾಡಬೇಕು ಎಂದು ಆಗ್ರಹಿಸಿದರು.
ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಸೋಂಕಿನ ನಂತ್ರ ಪೋಷಕರು ಭೀತಿಗೊಂಡಿದ್ದಾರೆ. ಕಳೆದ ಎರಡು ವಾರಗಳಿಂದ ಕೋವಿಡ್ ಸಂಖ್ಯೆ ಹೆಚ್ಚಾಗುವ ಕಾರಣದಿಂದಾಗಿ ಆನ್ ಲೈನ್ ಶಿಕ್ಷಣವನ್ನು ಆರಂಭಿಸಿ, ಶಾಲೆಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿದರು.