ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳನ್ನು ರಾಜ್ಯ ಸರ್ಕಾರ ಮಂಡಿಸುತ್ತಿದೆ. ಈ ವಿಧೇಯಕಗಳಿಗೆ ಅಂಗೀಕಾರ ದೊರೆಕಿಸಿಕೊಡುವ ಕಾರಣ, ಕಾಂಗ್ರೆಸ್ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿಗೊಳಿಸಲಾಗಿದೆ.
ಈ ಸಂಬಂಧ ಕರ್ನಾಟಕ ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಎಂ ಪಟ್ಟಣ ಅವರು ವಿಪ್ ಜಾರಿಗೊಳಿಸಿದ್ದಾರೆ. ಅದರಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ವಿವಿಧ ವಿಧೇಯಕಗಳು ಇನ್ನೂ ಅಂಗೀಕಾರವಾಗಬೇಕಾಗಿರುವುದರಿಂದ ಇಂದು ಮಧ್ಯಾಹ್ನ 3 ಗಂಟೆಗೆ ಎಲ್ಲಾ ವಿಧಾನಸಭಾ ಸದಸ್ಯರು ತಪ್ಪದೇ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ತಪ್ಪದೇ ಶಾಸಕರು ವಿಧಾನಸಭೆಯಲ್ಲಿ ಹಾಜರಿರಬೇಕು ಅಂತ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದೂ, ಅದರಂತೆ ತಾವುಗಳು ಕಡ್ಡಾಯವಾಗಿ ಸದನದಲ್ಲಿ ಹಾಜರಿರುವಂತೆ ಎಲ್ಲಾ ಶಾಸಕರಿಗೆ ವಿಪ್ ನಲ್ಲಿ ತಿಳಿಸಲಾಗಿದೆ.
ಬೆಂಗಳೂರಲ್ಲಿ ಪೊಲೀಸರ ಹೆಸರಿನಲ್ಲಿ ಸುಲಿಗೆ ಮಾಡಿದ ‘ನಕಲಿ ಪೊಲೀಸ್’ ಅರೆಸ್ಟ್
BREAKING : `ಹನಿಟ್ರ್ಯಾಪ್’ಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ : CM ಸಿದ್ದರಾಮಯ್ಯ ಘೋಷಣೆ | Honeytrap cace