ವಿಧಾನಪರಿಷತ್: ನೂರಾರು ಕೋಟಿ ರೂಪಾಯಿ ವಂಚನೆ ಮಾಡಿರುವ ಬೆಂಗಳೂರಿನ ವಸಿಷ್ಠ ಸಹಕಾರ ಸಂಘ ಪ್ರಕರಣದ ಹಗರಣ ವಿಚಾರಣೆಯನ್ನು ಸಿಬಿಐಗೆ ವಹಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ವಿಧಾನಪರಿಷತ್ ನಲ್ಲಿ ಈ ಕುರಿತು ಪ್ರಶ್ನೆ ಕೇಳಿದ ಕಾಂಗ್ರೆಸ್ ಸದಸ್ಯ ಯು.ಬಿ ವೆಂಕಟೇಶ್, ಸರ್ಕಾರಕ್ಕೆ ಆಗ್ರಹ ಮಾಡಿದರು.
ವೆಂಕಟೇಶ್ ಪ್ರಶ್ನೆಗೆ ಉತ್ತರ ನೀಡಿದ ಸಹಕಾರ ಸಚಿವ ಎಸ್. ಟಿ ಸೋಮಶೇಖರ್ , ಸಂಘದ ಅವ್ಯವಹಾರದ ಕುರಿತು ಎಲ್ಲ ರೀತಿಯ ಕ್ರಮಕೈಗೊಳ್ಳಲಾಗುತ್ತಿದೆ. ವಿಶೇಷಾಧಿಕಾರಿಯು ಅವಧಿಯಲ್ಲಿ ಸಾಲ ವಸೂಲಾತಿಗೆ ಕ್ರಮವಹಿಸಿ 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26,97 ಕೋಟಿ ರೂ ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದರು.