ಬೆಂಗಳೂರು: ಮಾರ್ಚ್.22ರ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡುವುದು ಖಚಿತ. ಇದರಲ್ಲಿ ಬದಲಾವಣೆಯೇ ಇಲ್ಲ ಎಂಬುದಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಘೋಷಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮರಾಠಿಗರ ಪುಂಡಾಟಿಕೆ, ಮರಾಠಿಗರ ಅಟ್ಟಹಾಸ, ಎಂಇಎಸ್ ನಿಷೇಧ ಸೇರಿದಂತೆ ವಿವಿಧ ವಿಚಾರಗಳ ಕುರಿತು ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಖಚಿತವೆಂಬುದಾಗಿ ತಿಳಿಸಿದ್ದಾರೆ.
ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಮಾಡಲಾಗುತ್ತಿದೆ. ನಾಳೆ ಬೆಳಗ್ಗೆ 11.30 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಿಂದ ಭಾರೀ ಮೆರವಣಿಗೆಯಿಂದ ಫ್ರೀಡಂ ಪಾರ್ಕ್ ಗೆ ತೆರಳಲಾಗುತ್ತದೆ ಎಂದಿದ್ದಾರೆ.
ನಾಳಿನ ಮೆರವಣಿಗೆಯಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮೇಗೌಡ, ಪ್ರವೀಣ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ವಿ ಗಿರೀಶ್ ಸೇರಿದಂತೆ ಇನ್ನೂ ಹಲವು ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಲಿದ್ದಾವೆ ಅಂತ ತಿಳಿಸಿದ್ದಾರೆ.
ಕೆಲಸದ ಸ್ಥಳದಲ್ಲಿ ‘ಯೇ ರೇಶ್ಮಿ ಜುಲ್ಫೀನ್’ ಹಾಡುವುದು ಲೈಂಗಿಕ ಕಿರುಕುಳವಲ್ಲ: ಬಾಂಬೆ ಹೈಕೋರ್ಟ್