ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯಗೊಳಿಸಿ, ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಅದನ್ನು ರಾಜ್ಯಪಾಲರ ಅಂಕಿತಕ್ಕೂ ಕಳುಹಿಸಲಾಗಿತ್ತು. ಆದ್ರೇ ಇದನ್ನು ವಾಪಾಸ್ ಕಳುಹಿಸಿದ್ದರು. ರಾಜ್ಯಪಾಲರ ಇಂತಹ ನಡೆಯನ್ನು ಖಂಡಿಸಿ, ನಾಳೆ ರಾಜಭವನಕ್ಕೆ ಕನ್ನಡ ಚಳುವಳಿ ಪಕ್ಷದ ವಾಟಾಶ್ ನಾಗರಾಜ್ ನೇತೃತ್ವದಲ್ಲಿ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು, ಕನ್ನಡ ನಾಮಫಲಕ, ಶಾಸನ ಸಭೆಯಲ್ಲಿ ಮಸೂದೆ ಆಗಲೇಬೇಕು. ಮಸೂದೆಗೆ ರಾಜ್ಯಪಾಲರ ಅಂಗೀಕಾರ ನೀಡಬೇಕೆಂದು ಒತ್ತಾಯಿಸಿ ದಿನಾಂಕ 07-02-2024ರ ನಾಳೆ ಮಧ್ಯಾಹ್ನ 12 ಗಂಟೆಗೆ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತಿದೆ ಎಂದು ತಿಳಿಸಿದ್ದಾರೆ.
ನಾವು ರಾಜಭವನಕ್ಕೆ ಮುತ್ತಿಗೆ ಹಾಕುತ್ತಿರೋದರ ಹಿನ್ನಲೆ ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯ ಮಾಡೋ ಮಸೂದೆಗೆ ಅಂಕಿತ ಹಾಕಬೇಕು ಎಂಬುದಾಗಿದೆ. ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಕಲಿಯಲೇಬೇಕು. ರೈಲ್ವೆ, ಬ್ಯಾಂಕ್ ನಲ್ಲಿ ಕನ್ನಡ ಕಡ್ಡಾಯವಾಗಬೇಕು. ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು ಎಂದು ತಿಳಿಸಿದ್ದಾರೆ.
ಈ ನಾಳಿನ ರಾಜಭವನ ಮುತ್ತಿಗೆ ಕಾರ್ಯಕ್ರಮದಲ್ಲಿ ಕನ್ನಡ ಒಕ್ಕೂಟದ ಮುಖಂಡರಾದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾರಾ ಗೋವಿಂದು, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಕೆ.ಆರ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ಪ್ರವೀಣ್ ಕುಮಾರ್ ಶೆಟ್ಟಿ, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಹೆಚ್.ವಿ ಗಿರೀಶ್ ಗೌಡ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
BREAKING: ‘ಭಾರತೀಯ ಪ್ರವಾಸಿಗ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಇರಾನ್’ಗೆ ಪ್ರಯಾಣಿಸಲು ‘ವೀಸಾ’ ಅಗತ್ಯವಿಲ್ಲ