ಉಡುಪಿ: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಕರ್ನಾಟಕದಲ್ಲಿ ’ಸಾವರ್ಕರ್ ಫ್ಲೆಕ್ಸ್ ‘ ವಿವಾದ ಇನ್ನೂ ನಿಂತಿಲ್ಲ. ಬ್ರಹ್ಮಗಿರಿ ಸರ್ಕಲ್ನಲ್ಲಿ ಹಿಂದೂ ಮಹಾಸಭಾ ಮುಖಂಡರು ವೀರ್ ಸಾವರ್ಕರ್ರ ಭಾವಚಿತ್ರವಿರುವ ಫ್ಲೆಕ್ಸ್ ಹಾಕಲಾಗಿದೆ. ಇದೀಗ ಪಿಎಫ್ಐ ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ತೆರವು ಮಾಡಲು ಪೊಲೀಸರಿಗೆ ಮನವಿ ಮಾಡಲಾಗಿದೆ
BREAKING NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ
ಶಿವಮೊಗ್ಗದಲ್ಲಿ ಸಾರ್ವಕರ್ ಭಾವಚಿತ್ರವುಳ್ಳ ಫ್ಲೆಕ್ಸ್ ತೆರವು ಸಂಬಂಧ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ಎಂಬಾತನಿಗೆ ಕಿಡಿಗೇಡಿಗಳು ಚಾಕು ಇರಿದಿರುವ ಪ್ರಕರಣ ಬಿಗುವಿನ ವಾತಾವರಣ ನಿರ್ಮಿಸಿದೆ.
BREAKING NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ
ಇದರ ಬೆನ್ನಲ್ಲೇ ತುಮಕೂರು ನಗರದ ಎಂಪ್ರೆಸ್ ಕಾಲೇಜು ಬಳಿಯೂ ಸಾರ್ವಕರ್ ಭಾವಚಿತ್ರವಿದ್ದ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ಬಳಿಕ ಉಡುಪಿಯಲ್ಲೂ ವಿವಾದ ಶುರುವಾಗಿದೆ. ಹೀಗಾಗಿ ಉಡುಪಿಯಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಉಡುಪಿ ನಗರಸಭೆಯ ಅನುಮತಿ ಪಡೆದು ಫ್ಲೆಕ್ಸ್ ಅಳವಡಿಸಲಾಗಿದ್ದು, ಇದನ್ನು ತೆರವು ಮಾಡಲು 10 ದಿನಗಳ ಕಾಲಾವಕಾಶವಿದೆ. ಹೀಗಾಗಿ ಪೊಲೀಸರು ಈ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆ ಒದಗಿಸಿದ್ದಾರೆ.
BREAKING NEWS : ಕಳಪೆ ಗುಣಮಟ್ಟದ ಮಧ್ಯಾಹ್ನದ ಬಿಸಿಯೂಟ ; ಅಡುಗೆ ನೌಕರನಿಗೆ ಕಪಾಳಮೋಕ್ಷ ಮಾಡಿದ ಶಿವಸೇನಾ ಶಾಸಕ