ಬೆಂಗಳೂರು: ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿಯೇ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಚಿತ್ರತಂಡದ ವಿರುದ್ಧ ದೂರು ನೀಡಲಾಗಿದೆ. ಈ ಮಧ್ಯೆ ಸಚಿವ ವಿ ಸುನೀಲ್ ಕುಮಾರ್ ( Minister V Sunil Kumar ) ಪ್ರತಿಕ್ರಿಯಿಸಿದ್ದು, ಏನ್ ಹೇಳಿದ್ದಾರೆ ಅಂತ ಮುಂದೆ ಓದಿ.
BREAKING NEWS: ನವೆಂಬರ್ 1 ರಂದು ನಟ ಪುನೀತ್ ರಾಜ್ಕುಮಾರ್ಗೆ ಮರೋಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಟ್ವಿಟ್ ಮಾಡಿದ್ದು, ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.
ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನವಾಗಿದೆ ಎಂಬ ಚರ್ಚೆ ಮಾಧ್ಯಮ ಹಾಗೂ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವೀರಗಾಸೆ ಕನ್ನಡದ ಹೆಮ್ಮೆಯ ಜಾನಪದ ಪರಂಪರೆ. ಚಲನಚಿತ್ರವೂ ಸೇರಿದಂತೆ ಯಾವುದೇ ಮನೋರಂಜನಾ ಮಾಧ್ಯಮದಿಂದ ಜಾನಪದ ಸಂಸ್ಕ್ರತಿಗೆ ಅವಮಾನವಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. (1/2)
— Sunil Kumar Karkala (@karkalasunil) October 26, 2022
ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ ಎಂಬುದಾಗಿ ಸಲಹೆ ಮಾಡಿದ್ದಾರೆ.
ಒಂದೊಮ್ಮೆ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆಗೆ ಅಪಮಾನವಾದರೆ ನಿರ್ಮಾಪಕರು ಹಾಗೂ ನಿರ್ದೇಶಕರು ಮರು ಚಿಂತನೆ ನಡೆಸುವುದು ಸೂಕ್ತ. (2/2)
— Sunil Kumar Karkala (@karkalasunil) October 26, 2022