ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ಶ್ರೀರ ಮೋದಿ ಅವರು ಹಿಂದುಳಿದ ಜಾತಿಗೆ ಸೇರಿದವರು ಅನ್ನುವ ಕಾರಣಕ್ಕೆ ನಿಂದನೆ ಮಾಡುತ್ತೀರಲ್ಲಾ ಕಾಂಗ್ರೆಸ್ ನಾಯಕರೇ… ಇದೇನಾ ನಿಮ್ಮ ಜಾತ್ಯತೀತತೆ? ಇದೇನಾ ನಿಮ್ಮ ಸಮಾಜವಾದ? ಇದೇನಾ ನಿಮ್ಮ ಸಾಮಾಜಿಕ ನ್ಯಾಯ? ಇದೇನಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನಕ್ಕೆ ನೀವು ಕೊಡುವ ಗೌರವ? ಎಂದು ಕಿಡಿಕಾರಿದ್ದಾರೆ.
ಇನ್ನೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಅವರು ಪ್ರಧಾನಿ ಮೋದಿ ಅವರಿಗೆ ಈ ಕೂಡಲೇ ಬಹಿರಂಗ ಕ್ಷಮೆ ಯಾಚಿಸಬೇಕು, ಇಲ್ಲವಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಮೊಯ್ಲಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಅಂತ ಆಗ್ರಹಿಸಿದ್ದಾರೆ.
ಅಯೋಧ್ಯೆ ರಾಮನ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು, ಇವರೆಗೆ 3 ಲಕ್ಷ ಜನರಿಂದ ದರ್ಶನ
ಜ.27ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ – ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್