ಬೆಂಗಳೂರು: ದೆಹಲಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಬೇಕು ಎಂದು ವೀರಶೈವ ಲಿಂಗಾಯತ ಸಂಘಟನೆಯಿಂದ ಪ್ರಧಾನಿ ಮೋದಿಗೆ ಒತ್ತಾಯಿಸಿದ್ದಾರೆ.
BIGG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮೂನ್ಸೂಚನೆ
ಮೊದಲ ಬಾರಿಗೆ ಬಸವ ಕಲ್ಯಾಣದ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ಹುಟ್ಟು ಮತ್ತು ಸಂಸತ್ ಸ್ಥಾಪಿಸಲಾಯಿತು ಎಂದು ಪ್ರಪಂಚಾದ್ಯಂತ ಮೋದಿ ಪ್ರಚಾರ ಮಾಡುತ್ತಿದ್ದಾರೆ. ಇದು ಶ್ಲಾಘನೀಯ ವಿಚಾರವಾಗಿದೆ. ನಿರ್ಮಾಣಗೊಳ್ಳುತ್ತಿರುವ ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ಹೆಸರಿಡಬೇಕು ಎಂದು ವೀರಶೈವ ಲಿಂಗಾಯತಾ ಸಂಘಟನಾ ವೇದಿಕೆಯ ರಾಷ್ಟ್ರಾಧ್ಯಕ್ಷರಾದ ಪ್ರದೀಪ ಕಂಕಣವಾಡಿ ಹೇಳಿದ್ದಾರೆ.
BIGG NEWS: ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮೂನ್ಸೂಚನೆ
ಈ ಕುರಿತು ಕರ್ನಾಟಕ ಸರಕಾರ ನಿರ್ಣಯ ಕೈಗೊಂಡು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದು ಕೇವಲ ಸಂಘಟನೆಯ ಕನಸಲ್ಲಿ, ದೇಶದ ಪ್ರತಿಯೊಬ್ಬರ ಕನಸು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.