ಬೆಂಗಳೂರು: ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕೆ ಎಸ್ ಸಿ ಎ ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್.7ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಚುನಾವಣಾ ಪ್ರಕ್ರಿಯೆ ಶುರುವಾಗಿ ಕ್ರಿಕೆಟಿಗೆ ವೆಂಕಟೇಶ್ ಪ್ರಸಾದ್ ಹಾಗೂ ವಿರೋಧಿ ಬಣದಿಂದ ಶಾಂತಕುಮಾರ್ ನಾಮಪತ್ರವನ್ನು ಸಲ್ಲಿಸಿದ್ದರು. ಆದರೇ ವಿರೋಧಿ ಬಣದಿಂದ ಅಭ್ಯರ್ಥಿಯಾಗಿ ಶಾಂತಕುಮಾರ್ ಸಲ್ಲಿಸಿದ್ದಂತ ನಾಮಪತ್ರ ತಿರಸ್ಕೃತಗೊಂಡಿದೆ.
ಈ ಹಿನ್ನಲೆಯಲ್ಲಿ ಕೆ ಎಸ್ ಸಿ ಎ ( Karnataka State Cricket Association -KSCA) ಅಧ್ಯಕ್ಷ ಸ್ಥಾನಕ್ಕೆ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವಿರೋಧವಾಗಿ ಆಯ್ಕೆಯಾದಂತೆ ಆಗಿದೆ.
Health Tips: ಫ್ರಿಡ್ಜ್‌ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?
ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ








