ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದ್ವಾರಕೀಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.