ಬೆಂಗಳೂರು: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಸ್ಯಾಂಡಲ್ ಪುಡ್ ಹಿರಿಯ ನಿರ್ದೇಶಕ ಎಂ.ಎಸ್ ಸತ್ಯು ಅವರಿಗೆ ಪ್ರಶಸ್ತಿಯ ಗರಿಮೆ ಸಂದಿದೆ.
ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ಆಯೋಜಿಸಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ, ಮೇರೆಗೆ ಈ ಆಯ್ಕೆ ಸಮಿತಿಯು ದಿ.04/03/2024ರಂದು ಸಭೆ ಸೇರಿ ಅವಿರೋಧವಾಗಿ ಆಯ್ಕೆ ಮಾಡಿರುವ ಮೂವರು (03) ಸಂಭಾವ್ಯ ಗಣ್ಯರ ಪಟ್ಟಿಯನ್ನು ಅರಸುತ್ತಾ, ಈ ಪೈಕಿ ಒಬ್ಬರನ್ನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿ”ಗೆ ಆಯ್ಕೆ ಮಾಡಿ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ, ಬೆಂಗಳೂರು ಇವರು ಕೋರಿರುತ್ತಾರೆ ಎಂದಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಜೀವಮಾನ ಸಾಧನೆ ಪ್ರಶಸ್ತಿಗೆ “ಶ್ರೀ ಎಂ.ಎಸ್.ಸತ” ಅಂತರರಾಷ್ಟ್ರೀಯ ಖ್ಯಾತಿಯ ಹಿರಿಯ ಚಲನಚಿತ್ರ ನಿರ್ದೇಶಕರು ಇವರನ್ನು ಆಯ್ಕೆ ಮಾಡಿ ಆದೇಶಿಸಲಾಗಿದೆ ಎಂದಿದ್ದಾರೆ.
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು