ಬೆಂಗಳೂರು: ಕನ್ನಡಪ್ರಭ, ಸಂಯುಕ್ತ ಕರ್ನಾಟಕ, ಪಬ್ಲಿಕ್ ಟಿವಿ, ಒನ್ ಇಂಡಿಯಾ ಸೇರಿದಂತೆ ಹಲವೆಡೆ ಕೆಲಸ ಮಾಡಿದ್ದ ಹಿರಿಯ ಪತ್ರಕರ್ತರಾದ ಎಸ್.ಕೆ. ಶ್ಯಾಮಸುಂದರ್ (72) ಸೋಮವಾರ ರಾತ್ರಿ ನಿಧನರಾದರು.
ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ದಿಗ್ವಿಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆರೋಗ್ಯ ಕ್ಷೀಣಿಸಿದ್ದರಿಂದ ಅವರು ಕೋಮಾಗೆ ಜಾರಿದ್ದರು. ಸತತವಾಗಿ ಚಿಕಿತ್ಸೆ ನೀಡಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಕೊನೆಯುಸಿರೆಳೆದಿದ್ದಾರೆ.
ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ನಡೆದ ಎಸ್.ಕೆ. ಶ್ಯಾಮಸುಂದರ್ ಅವರ ಅಂತಿಮ ಸಂಸ್ಕಾರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆಯುಡಬ್ಲೂಜೆ ಸಂತಾಪ:
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ (ಶ್ಯಾಮಣ್ಣ)ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.
ನಾಲ್ಕು ದಶಕಗಳ ಕಾಲ ಪತ್ರಕಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಮಾಹಿತಿ ಕಣಜವಾಗಿ ಕೆಲಸ ಮಾಡಿದ್ದ ಶ್ಯಾಮಸುಂದರ್ ಅವರ ನಿಧನದಿಂದ ಅನುಭವವಿರುವ ಹಿರಿಯ ಪತ್ರಕರ್ತರೊಬ್ಬರನ್ನು ಸುದ್ದಿಮನೆ ಕಳೆದುಕೊಂಡಂತಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.
BREAKING: ಹುಬ್ಬಳ್ಳಿಯಲ್ಲಿ ಬಿಹಾರದ ಯುವಕನಿಂದ ಬಾಲಕಿ ಹತ್ಯೆ ಪ್ರಕರಣ: ‘CID ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ