ನವದೆಹಲಿ: ಗಣರಾಜ್ಯೋತ್ಸವದಂದು ಪ್ರತಿ ವರ್ಷ ನೀಡುವಂತ ಪದ್ಮಭೂಷಣ ಪ್ರಶಸ್ತಿಗೆ ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅನಂತ್ ನಾಗ್ ಪಾತ್ರರಾಗಿದ್ದಾರೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನು ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಎಂಬ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. ಕಲೆ, ಸಮಾಜ ಸೇವೆ, ಸಾರ್ವಜನಿಕ ವ್ಯವಹಾರಗಳು, ವಿಜ್ಞಾನ ಮತ್ತು ಎಂಜಿನಿಯರಿಂಗ್, ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ನಾಗರಿಕ ಸೇವೆ ಮುಂತಾದ ವಿವಿಧ ವಿಭಾಗಗಳು / ಕ್ಷೇತ್ರಗಳಲ್ಲಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ. ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ‘ಪದ್ಮ ವಿಭೂಷಣ’ ನೀಡಲಾಗುತ್ತದೆ. ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ‘ಪದ್ಮಭೂಷಣ’ ಮತ್ತು ಯಾವುದೇ ಕ್ಷೇತ್ರದಲ್ಲಿನ ವಿಶಿಷ್ಟ ಸೇವೆಗಾಗಿ ‘ಪದ್ಮಶ್ರೀ’. ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ.
ಈ ಪ್ರಶಸ್ತಿಗಳನ್ನು ಸಾಮಾನ್ಯವಾಗಿ ಪ್ರತಿ ವರ್ಷ ಮಾರ್ಚ್ / ಏಪ್ರಿಲ್ ನಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಔಪಚಾರಿಕ ಸಮಾರಂಭಗಳಲ್ಲಿ ಭಾರತದ ರಾಷ್ಟ್ರಪತಿಗಳು ಪ್ರದಾನ ಮಾಡುತ್ತಾರೆ. 2025ನೇ ಸಾಲಿಗೆ, ಈ ಕೆಳಗಿನ ಪಟ್ಟಿಯ ಪ್ರಕಾರ 1 ಜೋಡಿ ಪ್ರಕರಣ (ಒಂದು ಪ್ರಕರಣದಲ್ಲಿ ಪ್ರಶಸ್ತಿಯನ್ನು ಒಂದು ಎಂದು ಪರಿಗಣಿಸಲಾಗುತ್ತದೆ) ಸೇರಿದಂತೆ 139 ಪದ್ಮ ಪ್ರಶಸ್ತಿಗಳನ್ನು ನೀಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. ಈ ಪಟ್ಟಿಯಲ್ಲಿ 7 ಪದ್ಮ ವಿಭೂಷಣ, 19 ಪದ್ಮಭೂಷಣ ಮತ್ತು 113 ಪದ್ಮಶ್ರೀ ಪ್ರಶಸ್ತಿಗಳು ಸೇರಿವೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಮತ್ತು ಈ ಪಟ್ಟಿಯಲ್ಲಿ ವಿದೇಶಿಯರು / ಎನ್ಆರ್ಐ / ಪಿಐಒ / ಒಸಿಐ ವರ್ಗಕ್ಕೆ ಸೇರಿದ 10 ಜನರು ಮತ್ತು 13 ಮರಣೋತ್ತರ ಪ್ರಶಸ್ತಿ ವಿಜೇತರು ಸೇರಿದ್ದಾರೆ.
ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ.
ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್‌ನಾಗ್ ಭಾಜನರಾಗಿದ್ದಾರೆ.
BREAKING: ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹರ್ವಿಂದರ್ ಸಿಂಗ್ ಗೆ ಪದ್ಮಶ್ರೀ ಪ್ರಶಸ್ತಿ | Harvinder Singh