ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಸದಾನಂದ ಸುವರ್ಣ ಅವರು ಇಂದು ವಿಧಿವಶರಾಗಿದ್ದಾರೆ.
ಈ ಬಗ್ಗೆ ಎಕ್ಸ್ ಮಾಡಿ ಸಂತಾಪ ಸೂಚಿಸಿರುವಂತ ಸಿಎಂ ಸಿದ್ಧರಾಮಯ್ಯ ಅವರು, ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು ಅಂತ ತಿಳಿಸಿದ್ದಾರೆ.
ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಲ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ ಎಂದು ಹೇಳಿದ್ದಾರೆ.
ನೂರಾರು ಕನ್ನಡ ಮತ್ತು ತುಳು ನಾಟಕಗಳನ್ನು ನಿರ್ದೇಶಿಸಿದ್ದ ಸುವರ್ಣರ ರಂಗಗರಡಿಯಿಂದ ಬಂದಿರುವ ಹಲವಾರು ಪ್ರತಿಭಾವಂತ ನಟ-ನಟಿಯರು ಕಲಾಜಗತ್ತಿನಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಅಂತ ತಿಳಿಸಿದ್ದಾರೆ.
ಸದಾನಂದ ಸುವರ್ಣರನ್ನು ಕಳೆದುಕೊಂಡಿರುವ ಅವರ ಶಿಷ್ಯವರ್ಗ ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ನಿಧನಕ್ಕೆ ಸಂತಾಪವನ್ನು ಸೂಚಿಸಿ್ದದಾರೆ.
ಹಿರಿಯ ರಂಗಕರ್ಮಿ, ಚಲನಚಿತ್ರ ನಿರ್ದೇಶಕ- ನಿರ್ಮಾಪಕ ಸದಾನಂದ ಸುವರ್ಣರ ನಿಧನದ ಸುದ್ದಿ ಕೇಳಿ ದು:ಖವಾಯಿತು.
ಸದಾನಂದ ಸುವರ್ಣರು ನಿರ್ಮಿಸಿದ್ದ ‘‘ಘಟಶ್ರಾದ್ಧ’’ ಚಿತ್ರ ಮತ್ತು ನಿರ್ದೇಶಿಸಿದ್ದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ ‘’ಕುಬಿ ಮತ್ತು ಇಯಾಲ’’ ಕತೆಯನ್ನಾಧರಿಸಿದ ಚಿತ್ರಗಳೆರಡೂ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿಗಳಿಗೆ ಭಾಜನವಾಗಿವೆ.… pic.twitter.com/JiVMZiQK2a
— CM of Karnataka (@CMofKarnataka) July 16, 2024
ಶೇ.100ರಷ್ಟು ರೈತರಿಗೆ ಸಾಲ ನೀಡಲು ಸಹಕಾರಿ ಸಚಿವರಿಗೆ ‘ಶಾಸಕ ದಿನೇಶ್ ಗೂಳಿಗೌಡ’ ಮನವಿ
BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!