ಮಂಗಳೂರು: ಸಿನಿಮಾ (Cinema) ಮತ್ತು ನಾಟಕಗಳಲ್ಲಿ (Drama) ದೈವಾರಾಧನೆಯನ್ನು ಮಾಡುವುದರಿಂದ ಅಪಮಾನವಗುತ್ತಿದೆ ಅಂಥ ಆರೋಪಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ, ತುಳುನಾಡ ದೈವಾರಾಧನಾ ಸಂರಕ್ಷಣಾ ವೇದಿಕೆ ಮನವಿ ಮಾಡಿದೆ.
BREAKING : ಪರೀಕ್ಷೆಯ ಭೀತಿ, ಉಡುಪಿಯಲ್ಲಿ ಕಟ್ಟಡದಿಂದ ಜಿಗಿದು ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ
BIGG NEWS: ಪ್ರತಿಷ್ಠಿತ ಫೋರ್ಬ್ಸ್ ಪಟ್ಟಿಯಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ!
ಈ ನಡುವ ಬಜರಂಗದಳದ ಮುಖಂಡ ಶರಣ ಪಂಪ್ವೆಲ್ ಎಚ್ಚರಿಕೆ ನೀಡಿದ್ದು, ಟಿವಿ, ಸಿನೆಮಾ ನಾಟಕಗಳಲ್ಲಿ ದೈವಾರಾಧನೆಯ ಪ್ರದರ್ಶನವಾಗಬಾರದು. ಮುಂದೆ ಕಂಡ ಕಂಡಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಮುತ್ತಿಗೆ ಹಾಕುತ್ತೇವೆ. ಈ ಬಗ್ಗೆ ರಿಷಬ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತೇವೆ ಅಂತ ಹೇಳಿದ್ದಾರೆ. ಈ ಬಗ್ಗೆ ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾಧಿಕಾರಿಗಳಿಗೆ ವಿಶ್ವ ಹಿಂದೂ ಪರಿಷತ್ – ಬಜರಂಗದಳ ನೇತೃತ್ವದಲ್ಲಿ ದೂರು ನೀಡಲಾಗಿದೆ. ಹೀಗೆ ದೈವಾರಾಧನೆ ಪ್ರದರ್ಶನವಾದಲ್ಲಿ ಮುತ್ತಿಗೆ ಹಾಕುತ್ತೇವೆ. ರಿಷಭ್ ಶೆಟ್ಟಿಗೂ ಎಚ್ಚರಿಕೆ ನೀಡುತ್ತಿದ್ದೇವೆ. ಸಿನೆಮಾದಲ್ಲೂ ದೈವರಾಧನೆಯ ಪ್ರದರ್ಶನವಾಗಬಾರದು. ಪ್ರದರ್ಶನವಾದ್ರೆ ನಮ್ಮ ಹೋರಾಟ ತೀವ್ರವಾಗುತ್ತದೆ. ಒಂದುವೇಳೆ ಪ್ರದರ್ಶನವಾದಲ್ಲಿ ಬೆಂಗಳೂರಿನಲ್ಲಿ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.