ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಮತ ಚಲಾಯಿಸಿದರು
ಬೆಳಗ್ಗೆ 10 ಗಂಟೆಗೆ ಆರಂಭವಾದ ಮತದಾನ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪಕ್ಷದ ಇತರ ನಾಯಕರೊಂದಿಗೆ ಮತ ಚಲಾಯಿಸಿದರು.
ಸಂಜೆ 6 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ. ಸಂಸತ್ ಭವನದಲ್ಲಿ ನಡೆಯುವ ಚುನಾವಣೆಯಲ್ಲಿ ಹಾಲಿ ಉಪರಾಷ್ಟ್ರಪತಿಗಳ ಉತ್ತರಾಧಿಕಾರಿಯನ್ನು ನಿರ್ಧರಿಸಲಾಗುವುದು