ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದ ವೈದ್ಯಕೀಯ ಕಾಲೇಜೊಂದರಲ್ಲಿ ಹಿರಿಯ ವಿದ್ಯಾರ್ಥಿಗಳು ಕಿರಿಯರ ವಿದ್ಯಾರ್ಥಿಗಳನ್ನು ಸಾಲಾಗಿ ನಿಲ್ಲಿಸಿ ಕಪಾಳಮೋಕ್ಷ ಮಾಡಿರುವ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್‌ ಆಗಿದೆ.

ವಿಡಿಯೋದಲ್ಲಿ ಕೆಲವು ವಿದ್ಯಾರ್ಥಿಗಳು ಒಂದು ಉದ್ದನೆಯ ಸಾಲಿನಲ್ಲಿ ನಿಂತಿದ್ದಾರೆ. ಇಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಎಲ್ಲರಿಗೂ ಕಪಾಳಮೋಕ್ಷ ಮಾಡುತ್ತಿರುವುದನ್ನು ನೋಡಬಹುದು. ಆದ್ರೆ, ಯಾವೊಬ್ಬ ವಿದ್ಯಾರ್ಥಿಯೂ ಕೂಡ ಏನೂ ಮಾತನಾಡದೇ ತಲೆ ತಗ್ಗಿಸಿ ನಿಂತಿದ್ದಾರೆ. ಅಷ್ಟೇ ಅಲ್ಲದೇ, ಹಿರಿಯ ವಿದ್ಯಾರ್ಥಿಗಳು ನಿಂದಿಸುತ್ತಿರುವುದು ಕೂಡ ಕೇಳಿ ಬರುತ್ತಿದೆ.

ಒಂದು ವಾರದಲ್ಲಿ ರಾಜ್ಯದ ಅತಿ ದೊಡ್ಡ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮತ್ತೊಂದು ರ‍್ಯಾಗಿಂಗ್‌ ಘಟನೆ ವರದಿಯಾಗಿದೆ. ರತ್ಲಾಮ್ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ ಇತ್ತೀಚಿನ ರ‍್ಯಾಗಿಂಗ್‌ ಘಟನೆ ವರದಿಯಾಗಿದೆ.

Rain In Karnataka : ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

2020ರ ಬ್ಯಾಚ್‌ನ 2021ನೇ ಬ್ಯಾಚ್‌ನ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್‌ ಮಾಡಿರುವ ವಿಡಿಯೋ ಇದಾಗಿದೆ. ಹಾಸ್ಟೆಲ್ ವಾರ್ಡನ್ ಈ ಬಗ್ಗೆ ಶುಕ್ರವಾರ ವರದಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ವೈದ್ಯಕೀಯ ಆಯೋಗದ ಸಹಾಯವಾಣಿ ಮೂಲಕ ಕಾಲೇಜು ಆಡಳಿತ ಮಂಡಳಿಗೆ ವಿಷಯ ತಿಳಿಸಲಾಗಿದ್ದು, ಬಳಿಕ ಕಾಲೇಜಿನ ರ‍್ಯಾಗಿಂಗ್‌ ವಿರೋಧಿ ಸಮಿತಿ ಸಭೆ ನಡೆಸಲಾಗಿದೆ. ಇತ್ತೀಚಿನ ರ‍್ಯಾಗಿಂಗ್‌ ಘಟನೆಗಳನ್ನು ಗಮನಿಸಿ, ಸಮಿತಿಯು ಹಿರಿಯ ವಿದ್ಯಾರ್ಥಿಗಳನ್ನು ಆರು ತಿಂಗಳ ಕಾಲ ತರಗತಿಗಳಿಂದ ಅಮಾನತುಗೊಳಿಸಬೇಕು ಮತ್ತು ಹಾಸ್ಟೆಲ್‌ನಲ್ಲಿ ಉಳಿಯುವುದನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂದು ಶಿಫಾರಸು ಮಾಡಿದೆ. ರ‍್ಯಾಗಿಂಗ್‌ ಮಾಡಿದ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆಯೂ ಸಮಿತಿ ಶಿಫಾರಸು ಮಾಡಿದೆ ಎಂದು ಫಿಸಿಯಾಲಜಿ ವಿಭಾಗದ ಪ್ರೊಫೆಸರ್ ಮತ್ತು ವಿಭಾಗದ ಮುಖ್ಯಸ್ಥ ಡಾ.ಜಗದೀಶ್ ಹುಂಡೇಕರಿ ಹೇಳಿದ್ದಾರೆ.

BREAKING NEWS: CWG 2022ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಮಹಿಳೆಯರ 55 ಕೆಜಿ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ʻಬಿಂದ್ಯಾರಾಣಿ ದೇವಿʼ

BIGG NEWS : ಮಕ್ಕಳ ಪೋಷಕರಿಗೆ ಸಿಹಿಸುದ್ದಿ : ‘ಹೊಸ ಶಾಲೆ ಆರಂಭ’ಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

Share.
Exit mobile version