ದೆಹಲಿ: ಗೆಳತಿಯೊಂದಿಗೆ ಶಾಪಿಂಗ್ ಮಾಡುತ್ತಿದ್ದಾಗ ಪತಿಯೋರ್ವ ಪತ್ನಿಗೆ ಸಿಕ್ಕಿಬಿದ್ದಿದ್ದು, ಸಾರ್ವಜನಿಕವಾಗಿಯೇ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಿನ್ನೆ ಗಾಜಿಯಾಬಾದ್ ಮಾರುಕಟ್ಟೆಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವಿಡಿಯೋದಲ್ಲಿ, ಪತ್ನಿಯು ಕೆಲವು ಸ್ನೇಹಿತರ ಜೊತೆ ಸೇರಿ ಗಂಡನ ಕಾಲರ್ ಹಿಡಿದು ಥಳಿಸಿದ್ದಾರೆ. ಈ ವೇಳೆ ಆತನ ಸಹಾಯಕ್ಕೆ ಬಂದ ಅವನ ಗೆಳತಿಗೂ ಥಳಿಸಲಾಗಿದೆ.
ಸ್ಥಳದಲ್ಲಿ ಅಪಾರ ಜನಸ್ತೋಮ ಜಮಾಯಿಸಿರುವುದನ್ನು ನೋಡಬಹುದು. ಪತಿ ವಿರುದ್ಧ ಪತ್ನಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
करवा चौथ के दिन दूसरी महिला काे शॉपिंग करवाने आया था पति। पत्नी ने पकड़ा। https://t.co/T3jB1xVOWn pic.twitter.com/gSFGxGaghn
— Ankit tiwari/अंकित तिवारी (@ankitnbt) October 13, 2022
ವರದಿಗಳ ಪ್ರಕಾರ, ಪತಿಯೊಂದಿಗೆ ಜಗಳವಾಡಿಕೊಂಡಿದ್ದ ಹೆಂಡತಿ ಆಕೆಯ ಹೆತ್ತವರೊಂದಿಗೆ ವಾಸಿಸುತ್ತಿದ್ದಳು. ಕರ್ವಾ ಚೌತ್ನಲ್ಲಿ ಶಾಪಿಂಗ್ ಮಾಡಲು ತನ್ನ ತಾಯಿಯೊಂದಿಗೆ ಬಂದಿದ್ದಳು. ಆಗ ಅವಳು ತನ್ನ ಪತಿಯನ್ನು ಇನ್ನೊಬ್ಬ ಮಹಿಳೆಯೊಂದಿಗೆ ನೋಡಿದ್ದು, ಪತಿಗೆ ಥಳಿಸಿದ್ದಾಳೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಗಮನಿಸಿ : ‘ಪ್ರತಿಭಾ ಪುರಸ್ಕಾರ’ಕ್ಕೆ ಅರ್ಜಿ ಸಲ್ಲಿಸಲು ಅ.21 ಕೊನೆಯ ದಿನಾಂಕ