ತುಮಕೂರು: ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ಹೆಡ್ ಕಾನ್ಸ್ಟೇಬಲ್ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಮೃತೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಇಲ್ಲಿನ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ವಿಚಾರಣೆಗೆ ಕರೆದು ವ್ಯಕ್ತಿ ಮೇಲೆ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೌಟುಂಬಿಕ ಕಲಹ ಸಂಬಂಧ ವಿಚಾರಣೆಗೆ ಕರೆಸಿದ ವೇಳೇಯಲ್ಲಿ ಹೆಡ್ ಕಾನ್ಸ್ಟೇಬಲ್ ಹೆಡ್ ಕಾನ್ಸ್ಟೇಬಲ್ ಕೇಶವನಾಯ್ಕ್ ಯುವಕನಿಗೆ ಕಪಾಳಕ್ಕೆ ಹೊಡೆದಿದ್ದು, ಅವ್ಯಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಹೊಡೆದಿದ್ದಾರೆ ಎನ್ನಲಾಗಿದೆ.. ಅಮೃತೂರು ಠಾಣೆ ಪೊಲೀಸರ ದೌರ್ಜನ್ಯಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಸಂಬಂಧಪಟ್ಟ ಪೋಲಿಸ್ ಅಧಿಕಾರಿಯ ವಿರುದ್ದ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.