ಮುಂಬೈ: ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಸೊಲ್ಲಾಪುರ ಜಿಲ್ಲಾ (ಗ್ರಾಮೀಣ) ಅಧ್ಯಕ್ಷ ಶ್ರೀಕಾಂತ್ ದೇಶ್‌ಮುಖ್ ಅವರನ್ನು ಪದಚ್ಯುತಗೊಳಿಸಿದೆ.

ದೇಶ್‌ಮುಖ್ ಮಹಿಳೆಯೊಂದಿಗೆ ಕಾಣಿಸಿಕೊಂಡಿರುವ ವೀಡಿಯೊ ವೈರಲ್ ಆದ ನಂತರ ಅವರನ್ನು ಪದಚ್ಯುತಗೊಳಿಸಿದೆ ಎಂದು ಪಕ್ಷದ ಮುಖಂಡರೊಬ್ಬರು ಮಂಗಳವಾರ ತಿಳಿಸಿದ್ದಾರೆ.

ದೇಶಮುಖ್ ಅವರ ದೂರಿನ ಮೇರೆಗೆ ಮುಂಬೈ ಪೊಲೀಸರು ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ರಾತ್ರಿ ತಿಳಿಸಿದ್ದಾರೆ.

ವಿಡಿಯೊ ಕ್ಲಿಪ್‌ನಲ್ಲಿ ಕಂಡುಬರುವ ಮಹಿಳೆ ಮುಂದೆ ಬಂದು ಪೊಲೀಸರಿಗೆ ದೂರು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಚಿತ್ರಾ ವಾಘ್ ಹೇಳಿದ್ದಾರೆ.

ಮಹಿಳೆ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ ದೇಶಮುಖ್ ಅವರು ಕೋಣೆಯಲ್ಲಿ ಹಾಸಿಗೆಯ ಮೇಲೆ ಕುಳಿತಿರುವಾಗ ಅವಳು ಅಳುತ್ತಿದ್ದಳು. ಇವರು ತನ್ನೊಂದಿಗೆ ಸಂಬಂಧ ಇಟ್ಟುಕೊಂಡು ವಂಚಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ.

ಏತನ್ಮಧ್ಯೆ, ಎರಡು ದಿನಗಳ ಹಿಂದೆ ದೇಶಮುಖ್ ಅವರು ನೀಡಿದ ದೂರಿನ ಮೇರೆಗೆ ವೀಡಿಯೊದಲ್ಲಿ ಕಂಡುಬರುವ ಮಹಿಳೆಯ ವಿರುದ್ಧ ಸುಲಿಗೆ ಆರೋಪದಡಿಯಲ್ಲಿ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನ ಓಶಿವಾರದ ನಿವಾಸಿಯಾಗಿರುವ 32 ವರ್ಷದ ಮಹಿಳೆಯಿಂದ ತಾನು “ಹನಿ-ಟ್ರ್ಯಾಪ್” ಆಗಿದ್ದೇನೆ ಎಂದು ದೇಶಮುಖ್ ಹೇಳಿಕೆ ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 384 (ಸುಲಿಗೆಗೆ ಶಿಕ್ಷೆ) ಅಡಿಯಲ್ಲಿ ಪೊಲೀಸರು ಮಹಿಳೆ ವಿರುದ್ಧ ದೂರು ದಾಖಲಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಬಂಧನವಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಒಂದೂವರೆ ವರ್ಷಗಳ ಹಿಂದೆ ಬಿಜೆಪಿಯ ಸೊಲ್ಲಾಪುರ ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾಗಿ ದೇಶಮುಖ ಅಧಿಕಾರ ವಹಿಸಿಕೊಂಡಿದ್ದರು.

BIGG NEWS: ಕಳೆದ ವಾರದಿಂದ ಹೆಚ್ಚುತ್ತಿದೆ ಕೊರೊನಾ: ಸದ್ಯಕ್ಕೆ ಮುಗಿಯುವುದಿಲ್ಲ ಸಾಂಕ್ರಾಮಿಕ ರೋಗ; WHO ಸ್ಪಷ್ಟನೆ

ಹೈದರಾಬಾದ್: ವಿದ್ಯುತ್‌ ಸ್ಪರ್ಶಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

Share.
Exit mobile version