ಕೋಲ್ಕತ್ತಾ: ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಹೊಸ ಯುಗ ಆರಂಭವಾಗಿದ್ದು, ಇಂದು (ಮೇ 9, 2026) ಬಿಜೆಪಿಯ ಸುವೇಂದು ಅಧಿಕಾರಿ (Suvendu Adhikari) ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಈ ಐತಿಹಾಸಿಕ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ವೇದಿಕೆಯ ಮೇಲೆ ನಿಂತು ಜನಸಮೂಹಕ್ಕೆ ಕೈಮುಗಿದು ತಲೆಬಾಗಿ ನಮಸ್ಕರಿಸಿದ (Bow Down) ವಿಡಿಯೋ ಈಗ ದೇಶಾದ್ಯಂತ ಭಾರೀ ವೈರಲ್ ಆಗುತ್ತಿದೆ.
ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಗ್ರೌಂಡ್‌ನಲ್ಲಿ ನಡೆದ ಸಮಾರಂಭದಲ್ಲಿ, ಬಂಗಾಳದ ಜನರು ನೀಡಿದ ಭರ್ಜರಿ ಜನಾದೇಶಕ್ಕಾಗಿ ಪ್ರಧಾನಿ ಮೋದಿ ಅವರು ಸಾರ್ವಜನಿಕರಿಗೆ ಸಾಷ್ಟಾಂಗ ನಮಸ್ಕಾರ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸಿದರು. “ಬಂಗಾಳದ ಜನಶಕ್ತಿಗೆ ನಾನು ತಲೆಬಾಗುತ್ತೇನೆ” ಎಂದು ಅವರು ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿದ್ದಾರೆ.
294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆಲ್ಲುವ ಮೂಲಕ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಆಡಳಿತಕ್ಕೆ ಅಂತ್ಯ ಹಾಡಿದೆ.
ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.
PM Modi bows down with folded hands at Suvendu Adhikari’s oath – Watch pic.twitter.com/wnj4PguJXR
— NDTV (@ndtv) May 9, 2026








