ಕಂಗ್ರಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಪ್ರವಾಹಕ್ಕೆ ಕಂಗ್ರಾದಲ್ಲಿ ಸೇತುವೆ ಕುಸಿದಿದೆ.
ಇದೀಗ ರೈಲ್ವೆ ಸೇತುವೆ ಕುಸಿತದ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ಚಕ್ಕಿ ನದಿಯ ಮೇಲೆ ನಿರ್ಮಿಸಲಾದ ರೈಲ್ವೆ ಸೇತುವೆಯ ಒಂದು ಭಾಗವು ಪ್ರವಾಹದಿಂದ ಕುಸಿದು ಬೀಳುತ್ತಿರುವುದನ್ನು ನೋಡಬಹುದು.
Chakki railway bridge near #Pathankot in #Kangra district collapsed pic.twitter.com/I3yxAr6eU4
— Mamta Gusain (@Mamtagusain5) August 20, 2022
ಇಂದು ಮುಂಜಾನೆ, ಧರ್ಮಶಾಲಾದಲ್ಲಿ ಮೇಘಸ್ಫೋಟ ವರದಿಯಾಗಿದ್ದು, ಆ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದಾಗಿ ಹಿಮಾಚಲ ಪ್ರದೇಶದ ಕಂಗ್ರಾ, ಕುಲು ಮತ್ತು ಮಂಡಿ ಪ್ರದೇಶಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ.
ಹಿಮಾಚಲ ಪ್ರದೇಶದ ಕಾಂಗ್ರಾ, ಚಂಬಾ, ಬಿಲಾಸ್ಪುರ್, ಸಿರ್ಮೌರ್ ಮತ್ತು ಮಂಡಿ ಜಿಲ್ಲೆಗಳಲ್ಲಿ ಇಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹಿಮಾಚಲ ಪ್ರದೇಶದ ವಿಪತ್ತು ನಿರ್ವಹಣಾ ಇಲಾಖೆಯು ರಾಜ್ಯದಲ್ಲಿ ಆಗಸ್ಟ್ 25 ರವರೆಗೆ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭೂಕುಸಿತದ ಎಚ್ಚರಿಕೆಯನ್ನು ನೀಡಿದೆ.
BREAKING NEWS: ಶಾಲಾ ಬಸ್- ಕ್ಯಾಂಟರ್ ನಡುವೆ ಭೀಕರ ರಸ್ತೆ ಅಪಘಾತ; ಇಬ್ಬರು ಚಾಲಕರು ದುರ್ಮರಣ