ಬೆಂಗಳೂರು ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ: ಆರೋಪಿ ವಿರುದ್ಧದ ಕೇಸ್ ವಜಾಕ್ಕೆ ಹೈಕೋರ್ಟ್ ನಿರಾಕರಣೆ

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಮಹಿಳೆಯರ ವಿಡಿಯೋಗಳನ್ನು ಗುಟ್ಟಾಗಿ ಚಿತ್ರೀಕರಿಸಿ, ಆಕ್ಷೇಪಾರ್ಹ ರೀತಿಯಲ್ಲಿ ‘Bangalore Metro Chicks’ ಎಂಬ ಇನ್‌ಸ್ಟಾಗ್ರಾಮ್ ಪುಟದಲ್ಲಿ ಹಂಚಿಕೊಳ್ಳುತ್ತಿದ್ದ ಪ್ರಕರಣದ ಆರೋಪಿಗೆ ಕರ್ನಾಟಕ ಹೈಕೋರ್ಟ್ ಭಾರಿ ಹಿನ್ನಡೆ ನೀಡಿದೆ. ತನ್ನ ವಿರುದ್ಧದ ಎಫ್‌ಐಆರ್ (FIR) ರದ್ದುಗೊಳಿಸುವಂತೆ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿದೆ. ನ್ಯಾಯಾಲಯದ ಕಟುವಾದ ಟೀಕೆ: ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಆರೋಪಿಯ ನಡೆಯನ್ನು ತೀವ್ರವಾಗಿ ಖಂಡಿಸಿತು. “ಮಹಿಳೆಯರು ಸಾರ್ವಜನಿಕ ಸಾರಿಗೆಯಲ್ಲೂ ಸುರಕ್ಷಿತವಾಗಿರಲು … Continue reading ಬೆಂಗಳೂರು ಮೆಟ್ರೋದಲ್ಲಿ ಮಹಿಳೆಯರ ವಿಡಿಯೋ ಚಿತ್ರೀಕರಣ: ಆರೋಪಿ ವಿರುದ್ಧದ ಕೇಸ್ ವಜಾಕ್ಕೆ ಹೈಕೋರ್ಟ್ ನಿರಾಕರಣೆ