ಭೋಪಾಲ್: ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ಭಾರೀ ಮಳೆಯ ನಡುವೆ ನಿನ್ನೆ ಎರಡು ಡಜನ್ಗೂ ಹೆಚ್ಚು ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ದೊಡ್ಡ ಚರಂಡಿಯಲ್ಲಿ ಸಿಲುಕಿಕೊಂಡಿತ್ತು. ಇದನ್ನು ಕಂಡ ಗ್ರಾಮಸ್ಥರ ಗುಂಪು ಟ್ರ್ಯಾಕ್ಟರ್ ಮತ್ತು ಹಗ್ಗವನ್ನು ಬಳಸಿ ದೊಡ್ಡ ಚರಂಡಿಯಿಂದ ಬಸ್ಅನ್ನು ಹೊರತೆಗೆದಿದ್ದಾರೆ.
ಮಧ್ಯಪ್ರದೇಶದ ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಈ ನಡುವೆ ನೀರು ತುಂಬಿದ್ದ ಚರಂಡಿಯಲ್ಲಿ ಶಾಲಾ ಬಸ್ ಸಿಲುಕಿಕೊಂಡಿದೆ. ಡ್ರೈನ್ನಲ್ಲಿ ನೀರಿನ ಮಟ್ಟ ಹೆಚ್ಚಾದ ಪರಿಣಾಮ ಬಸ್ನೊಳಗೆ ನೀರು ನುಗ್ಗಿದೆ. ಹೀಗಾಗಿ, ಮಕ್ಕಳು ಸಹಾಯಕ್ಕಾಗಿ ಕೂಗುತ್ತಿರುವುದು ಸ್ಥಳೀಯರಿಗೆ ಕೇಳಿಸಿದೆ. ನಂತ್ರ, ಅಲ್ಲಿಗೆ ಬಂದ ಜನರು ಬಸ್ಸಿನಲ್ಲಿದ್ದ ಎಲ್ಲಾ ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಸೇರಿಸಿದ್ದಾರೆ. ಇದೀಗ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
मध्य प्रदेश के शाजापुर जिले में लगातार हो रही बारिश से नदी नाले उफान पर है। नदी नाले उफान पर होने से स्कूल बस ड्राइवर की बड़ी लापरवाही सामने आई है। देखें वीडियो- pic.twitter.com/NpEqreu8nu
— Hindustan (@Live_Hindustan) July 23, 2022
ಭಾರತೀಯ ಹವಾಮಾನ ಇಲಾಖೆ (IMD) ಮಧ್ಯಪ್ರದೇಶದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ಆರೆಂಜ್ ಅಲರ್ಟ್ ನೀಡಿದೆ.
BREAKING NEWS : ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ ; ಇನ್ಮುಂದೆ ರಾತ್ರಿಯೂ ‘ರಾಷ್ಟ್ರಧ್ವಜ’ ಹಾರಿಸಲು ಅನುಮತಿ
‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಕ್ಷಗಳು ಪಕ್ಷಪಾತ ಧೋರಣೆಯಿಂದ ಮೇಲೇರಬೇಕು: ರಾಷ್ಟ್ರಪತಿ ರಾಮನಾಥ್ ಕೋವಿಂದ್